ಚಿಕ್ಕಮಗಳೂರು: ತರೀಕೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣವಾಗುತ್ತಿರುವ ೧.೯ ಕೋಟಿ ವೆಚ್ಚದ ಆಮ್ಲಜನಕ ಉತ್ಪಾದನಾ ಘಟಕವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲೆಯ ಜನತೆ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮಣಿಪಾಲ್, ಶಿವಮೊಗ್ಗ, ಬೆಂಗಳೂರು, ಆಸ್ಪತ್ರೆಗೆ ತೆರಳಬೇಕಿತ್ತು. ಆದರೆ ಇಂದು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿದ್ದು ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುತ್ತಿದೆ ಎಂದರು.
ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಆಮ್ಲಜನಕ ಉತ್ಪಾದನೆ ಘಟಕ ನಿರ್ಮಾಣಗೊಂಡಿದ್ದು ಅದರಂತೆ ಕೊಪ್ಪ, ಶೃಂಗೇರಿ, ಎನ್.ಆರ್ ಪುರ, ತಾಲ್ಲೂಕಿನಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.
ಇಂದು ೧.೯ ಕೋಟಿ ವೆಚ್ಚದಲ್ಲಿ ತರೀಕೆರೆ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನೆ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಇದು ಪ್ರತಿ ನಿಮಿ?ಕ್ಕೆ ೫೦೦ ಲೀಟರ್ ಆಮ್ಲಜನಕ ಉತ್ಪಾದನೆ ಮಾಡಲಿದೆ ಎಂದು ತಿಳಿಸಿದರು.
ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ಆಮ್ಲಜನಕದ ಕೊರತೆ ಉಂಟಾಗಿತು, ಇದನ್ನು ಮನಗಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಆದ್ಯತೆ ನೀಡಿವೆ. ಜೊತೆಗೆ ಆಸ್ಪತ್ರೆಗೆ ವೆಂಟಿಲೇಟರ್, ತಜ್ಞ ವೈದ್ಯರ ತಂಡ, ಸಿಬ್ಬಂದಿಗಳ ನೇಮಕ ಹಾಗೂ ಅವಶ್ಯಕ ವೈದ್ಯಕೀಯ ಉಪಕರಣಗಳನ್ನು ಒದಗಿಸಿದೆ ಎಂದು ಹೇಳಿದರು.
ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಲಿರುವ ಆಕ್ಸಿಜನ್ ಉತ್ಪಾದನಾ ಘಟಕವನ್ನು ಒಂದು ತಿಂಗಳೊಳಗಾಗಿ ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಲಭ್ಯವಾಗುವಂತೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಕೆಆರ್ ಐಡಿಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಭಾರತ ದೇಶವು ಸ್ವಾವಲಂಬನೆಯತ್ತ ಸಾಗುತ್ತಿದೆ. ಕೊರೋನಾ ಸಂದರ್ಭದಲ್ಲಿ ದೇಶದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿಯುವ ಮೂಲಕ ಸ್ವಾವಲಂಬಿ ರಾ? ಎಂಬುದನ್ನು ಸಾಬೀತುಪಡಿಸಿದರು. ಇದೀಗ ದೇಶಾದ್ಯಂತ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೋವಿಡ್ ಮೂರನೇ ಅಲೆ ಮುನ್ಸೂಚನೆಯಿದ್ದು ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು. ನೂತನವಾಗಿ ಅಜ್ಜಂಪುರ ತಾಲೂಕಿನಲ್ಲೂ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
ತರೀಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ಎ ಸುರೇಶ್ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಉತ್ತಮವಾದಂತಹ ವೈದ್ಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಇರುವಂತಹ ಕುಂದು ಕೊರತೆಗಳನ್ನು ತಿಳಿದು, ಅವಶ್ಯಕವಿರುವಂತಹ ಉಪಕರಣಗಳನ್ನು ಸರ್ಕಾರದಿಂದ ಕೊಡಿಸುವಂತಹ ಕೆಲಸವನ್ನು ಸರ್ಕಾರಿ ವೈದ್ಯಾಧಿಕಾರಿಗಳು ಮಾಡಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅವಶ್ಯಕವಿರುವಂತಹ ಸ್ಕ್ಯಾನರ್‌ಗಳ ಕೊರತೆ ಇದ್ದು, ಸಾರ್ವಜನಿಕರು ಬ್ಲೆಡ್ ಟೆಟ್ಸ್‌ಗೂ ಕೂಡ ಶಿವಮೊಗ್ಗ ಆಸ್ಪತ್ರೆಗೆ ಹೊಗುವಂತಹ ಪರೀಸ್ಥಿತಿಯನ್ನು ಜಿಲ್ಲೆಯ ಜನರು ಎದುರಿಸುತ್ತಿದ್ದರು. ಜನರಿಗೆ ಅತೀ ಅವಶ್ಯಕವಿರುವಂತಹ ಇ.ಎನ್.ಟಿ, ೩ಡಿ ಏಕ್ಸರೆ, ಬ್ಲೇಡ್ ಟೆಟ್ಸ್ ಉಪಕರಣಗಳ ವ್ಯವಸ್ಥೆಯನ್ನು ತರೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಒದಗಿಸಲಾಗಿದೆ ಎಂದ ಅವರು ಕೇವಲ ೧೦೦ ರೂ ಗಳಲ್ಲಿ ಸಾರ್ವಜನಿಕರು ಬ್ಲೇಡ್ ಟೆಟ್ಸ್ ಮಾಡಿಸಿಕೊಳ್ಳುವಂತಹ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿ?ತ್ ಉಪಸಭಾಪತಿ ಎಂ.ಕೆ ಪ್ರಾಣೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಉಮೇಶ್, ತರೀಕೆರೆ ತಹಸಿಲ್ದಾರ್ ನಂದಕುಮಾರ್, ಉಪ ವಿಭಾಗಾಧಿಕಾರಿ ಸಿದ್ದಲಿಂಗರೆಡ್ಡಿ , ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಆನಂದಪ್ಪ, ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

























Discussion about this post