ನವದೆಹಲಿ: ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ ಕೂಡ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆದ ಭಾರತೀಯರಿಗೆ 10 ದಿನಗಳ ಕಾಲ ಕ್ವಾರಂಟೈನ್ ವಿಧಿಸಿದ್ದ ಇಂಗ್ಲೆಂಡ್ ಗೆ ಭಾರತ ತಿರುಗೇಟು ನೀಡಿದೆ.
ಕೋವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ (RTPCR ) ಪರೀಕ್ಷೆಯ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ.
ಹಾಗೂ ಇಂಗ್ಲೆಂಡ್ ಪ್ರಜೆಗಳಿಗೆ ಕೂಡ ಕ್ವಾರಂಟೈನ್ ಕಡ್ಡಾಯಗೊಳಿಸಿ ಇಂಗ್ಲೆಂಡ್‌ಗೆ ಭಾರತ ತಿರುಗೇಟು ನೀಡಿದೆ. ಭಾರತ ಪ್ರಯಾಣಕ್ಕೆ 72 ಗಂಟೆ ಮುಂಚಿತವಾಗಿ RT-PCR ಪರೀಕ್ಷೆಗೆ ಒಳಗಾಗಬೇಕು. ಭಾರತಕ್ಕೆ ಬಂದ ತಕ್ಷಣವೇ ಏರ್ ಪೋರ್ಟ್ ನಲ್ಲಿ RT-PCR ಪರೀಕ್ಷೆಗೆ ಒಳಗಾಗಬೇಕು. ಲಸಿಕೆ ಪಡೆದಿರಲಿ, ಪಡೆಯದೇ ಇರಲಿ, RT-PCR ಪರೀಕ್ಷೆ, ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
ಭಾರತದ ನಾಗರಿಕರು ಇಂಗ್ಲೆಂಡ್ ಪ್ರಯಾಣಕ್ಕೆ ಇಂಗ್ಲೆಂಡ್ ಇದೇ ನಿಯಮ ಜಾರಿ ಮಾಡಿತ್ತು. ಹೀಗಾಗಿ ಇಂಗ್ಲೆಂಡ್ ನಿಯಮಕ್ಕೆ ಪ್ರತಿಯಾಗಿ ಭಾರತದಿಂದ ಅದೇ ನಿಯಮ ಜಾರಿ ಮಾಡಿದೆ

























Discussion about this post