ಮುಂಬೈ: ಸಮುದ್ರದ ಮಧ್ಯದಲ್ಲಿ ಗೋವಾಕ್ಕೆ ಹೋಗುತ್ತಿದ್ದ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ್ದು, ಬಾಲಿವುಡ್ ಸ್ಟಾರ್ ನಟನ ಮಗ ಸೇರಿ ಒಟ್ಟು ಹತ್ತು ಮಂದಿ ಬಿಗ್ ಶಾಟ್ಸ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎನ್‍ಸಿಬಿ (NCB) ಅಧಿಕಾರಿಗಳಿಗೆ ಮುಂಬೈ ಸಮುದ್ರದ ಮಧ್ಯದಲ್ಲಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು ಎಂಬುದರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಡ್ರಗ್ಸ್ ರೇವ್ ಪಾರ್ಟಿ ಮಾಡುತ್ತಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟು 10 ಮಂದಿಯನ್ನು ಎನ್‍ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಆರ್ಯನ್ ಫೋನ್ ಅನ್ನು ಸಹ ವಶಪಡಿಸಿಕೊಂಡಿರುವ ಎನ್‍ಸಿಬಿ ಅಧಿಕಾರಿಗಳು ಸ್ಕ್ಯಾನ್ ಮಾಡುತ್ತಿದ್ದಾರೆ ಮತ್ತು ಫೋನ್ ಚಾಟ್ ಲಿಸ್ಟ್ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಮಾದಕ ದ್ರವ್ಯ ತಡೆ ದಳದಿಂದ ಕಾರ್ಯಾಚರಣೆ ನಡೆದಿತ್ತು.

























Discussion about this post