ಚಿಕ್ಕಮಗಳೂರು: ಇತ್ತೀಚೆಗೆ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭದ್ರ ನಾಲೆಗೆ ಕುಟುಂಬದ ನಾಲ್ವರು ಸದಸ್ಯರು ಕಾರ್ ಸಮೇತ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಮಳಲಿ ಚನ್ನೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಆತ್ಮಹತ್ಯೆಗೆ ಪ್ರಯತ್ನಿಸಿದವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಳೇಜೇಡಿಕಟ್ಟೆ ಗ್ರಾಮಸ್ಥರು ಎಂದು ಗುರುತಿಸಲಾಗಿದೆ. ಹಳೇ ಜೇಡಿಕಟ್ಟೆಯ ನೀತು (35)ವನ್ನು ಬೆಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ಅವರಿಗೆ ೧೩ ವರ್ಷ ಧ್ಯಾನ್ ಎಂಬ ಮಗನಿದ್ದಾನೆ.
ಘಟನೆ ವಿವರ: ಕಳೆದ ರಾತ್ರಿ 1 ಗಂಟೆಯ ಸುಮಾರಿಗೆ ಸ್ವಿಫ್ಟ್ ಕಾರಿನಲ್ಲಿ ಬಂದ ನೀತು ಮತ್ತು ಮಂಜು ಹಾಗೂ ಮಂಜು ತಾಯಿ ಸುನಂದಮ್ಮ ಅವರು ಒಟ್ಟಾಗಿ ಕಾರಿನ ಸಮೇತ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 35 ವರ್ಷದ ನೀತು ಹಾಗೂ 13 ವರ್ಷ ಮಗ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಮಂಜು ಮತ್ತು ಅವರ ತಾಯಿ ಪತ್ತೆಯಾಗಿಲ್ಲ. ವೇಗವಾಗಿ ಹರಿಯುತ್ತಿರುವ ನದಿಯ ರಭಸಕ್ಕೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತರೀಕೆರೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಘಟನೆ ನಡೆದ ಸ್ಥಳಕ್ಕೆ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನಾಪತ್ತೆಯಾದವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.

























Discussion about this post