ಚಿಕ್ಕಮಗಳೂರು: ಜಿಲ್ಲೆಯ ಪ್ರತಿಯೊಂದು ಗ್ರಾಮಗಳನ್ನು ನೈರ್ಮಲ್ಯವಾಗಿಸುವ ನಿಟ್ಟಿನಲ್ಲಿ ಮನೆ ಮನೆ ಕಸ ಸಂಗ್ರಹಣೆ ಜತೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಾರ್ವಜನಿಕ ರಸ್ತೆ, ಚರಂಡಿ ಹೂಳು ತೆಗೆಯುವ ನಿರಂತರ ಸಮಗ್ರ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಸ್ವಚ್ಚ ಭಾರತ ಮಿ?ನ್ ಯೋಜನೆಯಡಿ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯ ೨೨೬ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಂಡಿರುವ ಸಮಗ್ರ ಸ್ವಚ್ಚತಾ ಅಭಿಯಾನದ ಕ್ರಮಗಳ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಜಿಲ್ಲೆಯ ಎಲ್ಲಾ ಗ್ರಾಮೀಣ ಸಮುದಾಯದಲ್ಲಿ ನೀರು, ನೈರ್ಮಲ್ಯ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸುವುದರ ಜೊತೆಗೆ ಪ್ರತಿ ಹಳ್ಳಿಗಳನ್ನು ಸ್ವಚ್ಚ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಅಕ್ಟೋಬರ್.೨ ರಿಂದ ಗ್ರಾಮಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಬಸ್ ನಿಲ್ದಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಮೈದಾನ, ಪ್ರವಾಸಿ ತಾಣ, ಐತಿಹಾಸಿಕ ದೇವಾಲಯಗಳಲ್ಲಿ ಶ್ರಮದಾನ ಕಾರ್ಯ ಕೈಗೊಳ್ಳಲಾಗುವುದು, ಜೊತೆಗೆ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸ್ವಚ್ಚವಾಹಿನಿ ವಾಹನಗಳನ್ನು ಬಳಸಿಕೊಂಡು ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮಗಳಲ್ಲಿ ಚರಂಡಿ ಹೂಳು ತೆಗೆಯುವುದು, ಗಿಡಗಂಟಿಗಳನ್ನು ಕತ್ತರಿಸುವ ಮೂಲಕ ನಿರಂತರವಾಗಿ ಸಮಗ್ರ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗುವುದು ಎಂದರು.
ಪ್ರತಿ ಗ್ರಾಮಗಳಲ್ಲಿನ ಪ್ರತಿ ಮನೆ ಮನೆ ಕಸ ಸಂಗ್ರಹಣೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ೧೨೩ ಗ್ರಾಮ ಪಂಚಾಯಿತಿಗಳಿಗೆ ಸ್ವಚ್ಚವಾಹಿನಿ ವಾಹನಗಳನ್ನು ವಿತರಿಸಲಾಗಿದೆ. ೧೩೩ ಪಂಚಾಯಿತಿಗಳಲ್ಲಿ ತ್ಯಾಜ್ಯ ಸಂಗ್ರಹಣೆಗಾಗಿ ಪ್ರತಿ ಮನೆಗೆ ಕಸದ ಬುಟ್ಟಿಗಳನ್ನು ವಿತರಿಸಲಾಗಿದೆ. ಬಾಕಿ ಉಳಿದ ೫೧ ಗ್ರಾ.ಪಂಗಳಿಗೆ ಅಕ್ಟೋಬರ್ ೨ ರ ಗಾಂಧೀಜಯಂತಿಯಂದು ಸ್ವಚ್ಚವಾಹಿನಿ ವಾಹನಗಳ ವಿತರಣೆ ಮಾಡಲಾಗುವುದು ಎಂದರು.
ಪ್ರತಿ ಮನೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಹೆಚ್ಚು ಆದ್ಯತೆ ನೀಡಲಾಗುವುದು, ಇಂಗುಗುಂಡಿಗಳ ನಿರ್ಮಾಣ ಸಮುದಾಯ ಶೌಚಾಲಯ ನಿರ್ಮಾಣಕ್ಕೆ ಮಹತ್ವ ನೀಡಲಾಗುವುದು ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ದಿನ ಮನೆ ಮನೆಗೆ ತೆರಳಿ ಪ್ರತಿನಿತ್ಯ ಪ್ಲಾಸ್ಟಿಕ್, ಗಾಜು ಮತ್ತಿತರ ತ್ಯಾಜ್ಯಗಳನ್ನು ಸಂಗ್ರಹಿಸುವ ಕುರಿತು, ಯಾವ ಗ್ರಾಮ? ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಯಾರು? ಜೊತೆಗೆ ಸ್ವಚ್ಚವಾಹಿನಿ ವಾಹನಗಳ ಓಡಾಟದ ಚಲನವಲನಗಳ ಕುರಿತು ವೇಳಾಪಟ್ಟಿ ಸಿದ್ದಪಡಿಸುವಂತೆ ಎಲ್ಲಾ ಪಂಚಾಯಿತಿಗಳಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಜಿಲ್ಲೆಯ ೮೬ ಗ್ರಾಮಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಅ.೨ ರಂದು ಹೊಸದಾಗಿ ೫ ತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು, ಸಂಗ್ರಹಿಸಿದ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುವ ಕಾರಣ ಜನನಿಬಿಡ ೩೦ ಪ್ರವಾಸಿತಾಣಗಳನ್ನು ಸ್ವಚ್ಚತಾ ಅಭಿಯಾನಕ್ಕೆ ಆಯ್ಕೆ ಮಾಡಿ ಮುಂದಿನ ದಿನಗಳಲ್ಲಿ ನಗರಸಭೆ, ಎನ್‌ಎಸ್‌ಎಸ್, ಸ್ವಯಂ ಸೇವಾ ಸಂಘಗಳ ಸಹಕಾರದೊಂದಿಗೆ ಜಾಗೃತಿ ಮೂಡಿಸುವುದರ ಜತೆಗೆ ಸ್ವಚ್ಚತಾ ಅಭಿಯಾನ ಕೈಗೊಳ್ಳಲಾಗುವುದು. ಇದರಿಂದಾಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಮನಸ್ಸಿಗೆ ಆಹ್ಲಾದಕರ ವಾತಾವರಣ ನಿರ್ಮಿಸಲಿದೆ ಎಂದು ತಿಳಿಸಿದರು.
ಅಕ್ಟೋಬರ್ ಅಂತ್ಯದೊಳಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಹಂತ ಹಂತವಾಗಿ ಸಮಗ್ರ ಸ್ವಚ್ಚತಾ ಅಭಿಯಾನವನ್ನು ಅನು?ನಗೊಳಿಸಲಾಗುವುದು, ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಸುಸ್ಸಜ್ಜಿತವಾದ ಅಂಗವಾಡಿ ನಿರ್ಮಾಣ ಜತೆಗೆ ಕೈತೋಟ, ಕಾಪೌಂಡ್, ದಾಸ್ತಾನು ಉಗ್ರಾಣ, ಶೌಚಾಲಯ, ವಿದ್ಯುತ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗಿದೆ. ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗೂ ಅಗತ್ಯವಾದ ಕಾಂಪೌಡ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಿ ಸ್ವಚ್ಚ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ ಗ್ರಾಮಪಂಚಾಯಿತಿಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು, ಜನಪ್ರತಿನಿಧಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜನಜಾಗೃತಿ ಮೂಡಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸ್ವಚ್ಚ ಭಾರತ್ ಮಿ?ನ್ ಜಿಲ್ಲಾ ನೋಡಲ್ ಅಧಿಕಾರಿ ಸೋಮಶೇಖರ್, ಸಮಾಲೋಚಕರಾದ ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

























Discussion about this post