ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 27 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಶುಕ್ರವಾರ ಜಿಲ್ಲೆಯ 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ತಾಲ್ಲೂಕಿನ 5, ಕೊಪ್ಪ ತಾಲ್ಲೂಕಿನ 4, ಶೃಂಗೇರಿ ತಾಲ್ಲೂಕಿನ ಇಬ್ಬರು ಹಾಗೂ ನರಸಿಂಹರಾಜಪುರ ತಾಲ್ಲೂಕಿನ ಓರ್ವ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿ ದೆ. ಇಂದು ಪತ್ತೆಯಾದ ಸೋಂಕಿತರನ್ನು ಹೋಮ್ ಐಸೋಲೇಶನ್ಗೆ ಒಳಪಡಿಸಲಾಗಿದೆ.
ಶುಕ್ರವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಆರೋಗ್ಯ ಇಲಾಖೆ ದೃಢಪಡಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ೫೧,೦೦೬ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ೫೦,೨೨೪ಮಂದಿ ಗುಣಮುಖರಾಗಿದ್ದು, ೩೬೦ಮಂದಿಯಲ್ಲಿ ಸೋಂಕು ಸಕ್ರೀಯವಾಗಿದೆ. ಇದುವರೆಗೂ ೩೯೫ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

























Discussion about this post