ಚಿಕ್ಕಮಗಳೂರು: ಜಿ.ಟಿ.ದೇವೇಗೌಡರು ಜೆಡಿಎಸ್ ಪಕ್ಷದ ಶಕ್ತಿ ಅವರು ಪಕ್ಷ ತೊರೆದು ಕಾಂಗ್ರೆಸ್ಗೆ ಹೋದಲ್ಲಿ ಪಕ್ಷಕ್ಕೆ ಬಾರೀ ನಷ್ಟವಾಗಲಿದೆ ಎಂದು ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ವಿ ದತ್ತ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡರಿ ಗೆ ಪಕ್ಷ ಸೂಕ್ತ ಆದ್ಯತೆ, ಗೌರವ ನೀಡಿಲ್ಲ ಎಂದರೆ ಅದು ತಪ್ಪು. ಹಿರಿಯರು ಮತ್ತು ಸಂಘಟನಾ ಶಕ್ತಿಯಾಗಿರುವ ಅವರು ಜನತಾ ಪರಿವಾರದಿಂದ ಬಂದಿದ್ದು, ಅವರ ಮನ ಸ್ಸಿಗೆ ನೋವಾಗಿರಬಹುದು ಎಂದು ತಿಳಿಸಿದರು.
ಜಿ.ಟಿ.ದೇವೇಗೌಡರನ್ನು ಕಡೆಗಣಿಸಿ, ಮತ್ಯಾರಿಗೋ ಆದ್ಯತೆ ನೀಡಿ ವೈಭವೀಕರಿಸಿದ್ದರಿಂದ ಅವರ ಮನಸ್ಸಿಗೆ ನೋವಾಗಿರಬಹುದು. ಬೇರೆ ಪಕ್ಷಕ್ಕೆ ಜಿ.ಟಿ.ದೇವೇಗೌಡರನ್ನು ಹೋಗ ಲು ಬಿಡಬಾರದು, ಹಿರಿಯರಾದ ಎಚ್.ಡಿ.ದೇವೇಗೌಡರು ಅವರನ್ನು ಕರೆಸಿ ಮಾತನಾಡ ಬೇಕು. ಅವರ ಮನಸ್ಸಿನ ಭಾವನೆಯನ್ನು ಅರ್ಥ ಮಾಡಿಕೊಂಡು ವಿಶ್ವಾಸಕ್ಕೆ ತೆಗೆದುಕೊ ಳ್ಳುವ ಪ್ರಯತ್ನ ಮಾಡಬೇಕು. ಮೂಲ ಜನತಾ ಪರಿವಾರದಿಂದ ಬಂದ ಅವರನ್ನು ಜೆಡಿ ಎಸ್ ಪಕ್ಷದಲ್ಲೇ ಉಳಿಸಿಕೊಳ್ಳುತ್ತಾರೆಂಬ ನಂಬಿಕೆ ಇದೆ ಎಂದರು.
ವೈಎಸ್ವಿ ದತ್ತ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆಂಬ ವದಂತಿಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಹತ್ತಿರವಾದರೆ ನಮ್ಮಂತವರಿಗೆ ಕಷ್ಟವಾಗುತ್ತದೆ. ಅಲ್ಪ ಸಂಖ್ಯಾತರ ಒಡನಾಟ ಹೊಂದಿ ಅವರನ್ನೇ ನೆಚ್ಚಿಕೊಂಡಿರುವ ನಮ್ಮಂಥವರಿಗೆ ತುಂಬಾ ಕಷ್ಟವಾಗುತ್ತದೆ ಎಂದು ಅಭಿಪ್ರಾಯಿಸಿದರು.

























Discussion about this post