ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ
ಸರ್ಕಾರದ ಗಮನಕ್ಕೆ ತರದೇ ಮುಖ್ಯಕಾರ್ಯದರ್ಶಿಗಳು ದೇವಸ್ಥಾನ ತೆರವುಗೊಳಿಸುವ ಕುರಿತು ಪತ್ರ ಬರೆಯಲು ಸಾಧ್ಯವಿಲ್ಲ. 15ನೇ ತಾರೀಖಿನಿಂದ ಜಿಲ್ಲಾಧಿಕಾರಿಗಳು ಹಾಗೂ ತಹಶಿಲ್ದಾರರು ಸುಪ್ರೀಂ ಕೋರ್ಟ್ ನ ತೀರ್ಮಾನದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾದ ಮೇಲೆ ತಮ್ಮ ಮಾನ ಉಳಿಸಿಕೊಳ್ಳಲು ಸರ್ಕಾರ ಬಣ್ಣ ಬದಲಾಯಿಸಿದೆ. ಈಗ ಅವರಿಗೆ ಒಡೆಯಬೇಡಿ ಎಂಬ ಸೂಚನೆ ಕೊಡ್ತೀವಿ ಎನ್ನುತ್ತಿದ್ದಾರೆ. ಎಂದು ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.
ಇದೇ ವಿಷಯ ಮಾತನಾಡುತ್ತಾ, ’ಹಾಗಾದ್ರೆ, ಸರ್ಕಾರದ ಗಮನಕ್ಕೆ ಬಾರದೆ ದೇವಾಲಯ ಒಡೆದಿದ್ದಾರಾ? ಮೈಸೂರು ಸಂಸದರು ಈಗ ದೇವಾಲಯ ಒಡೆದಮೇಲೆ ಮಾತಾಡ್ತಾರೆ. ಇದರ ಬದಲು ಸರ್ಕಾರದ ಗಮನಕ್ಕೆ ತಂದು ದೇವಸ್ಥಾನ ಒಡೆಯುವುದನ್ನು ತಡೆಯಬೇಕಿತ್ತು’ ಎಂದು ಟೀಕಿಸಿದ್ದಾರೆ.
ಹಿಂದೂ ದೇವಾಲಯಗಳನ್ನು ಬಿಜೆಪಿ ಯವರೇ ನಾಶ ಮಾಡೋದು. ಮಾತಾಡಿದ್ರೆ ರಾಮನ ಜಪ, ರಾಮ ಮಂದಿರ ಕಟ್ಟುತ್ತೇವೆ ಅಂತ ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಭಕ್ತರ ಗಮನಕ್ಕೆ ತಂದು ಪರ್ಯಾಯ ವ್ಯವಸ್ಥೆ ಮಾಡಿ ಆಮೇಲೆ ದೇವಸ್ಥಾನ ಕೆಡವಬಹುದಿತ್ತು. ಏಕಾಏಕಿ ದೇವಸ್ಥಾನ ದ್ವಂಸ ಮಾಡಿರುವುದು ಬಿಜೆಪಿಯವರ ಢೋಂಗಿತನವನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಸದನದಲ್ಲಿ ಕಿಡಿಕಾರಿದ್ದಾರೆ.
ಓಟಿಗಾಗಿ ಹಿಂದುತ್ವ
ಬಿಜೆಪಿಯ ಹಿಂದುತ್ವವಾದ ಎನ್ನೋದು ಕೇವಲ ರಾಜಕಾರಣಕ್ಕಾಗಿ, ಓಟಿಗಾಗಿ ಮಾತ್ರ, ಅಸಲಿಗೆ ಬಿಜೆಪಿಯವರಿಗೆ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಪ್ರಬಲ ವಾದ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ಣಯ ಬಂದಿದ್ದು ಇವತ್ತು ನಿನ್ನೆಯದಲ್ಲ. ಸರ್ಕಾರ ಇಷ್ಟು ದಿನ ಏನು ಮಾಡ್ತಾ ಇತ್ತು? ಬಿಜೆಪಿ ಸರ್ಕಾರ ಬಂದು ಎರಡೂವರೆ ವರ್ಷ ಆಯ್ತು, ಈಗ ಯಾಕೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡುವ ನಾಟಕ? ಇದು ಢೋಂಗಿತನವಲ್ಲದೆ ಇನ್ನೇನು? ನಾವು ಬಿಜೆಪಿಯವರಂತೆ ರಾಜಕೀಯಕ್ಕಾಗಿ ಧರ್ಮ, ದೇವರನ್ನು ಬಳಸಿಕೊಳ್ಳಲ್ಲ ಎಂದು ತಮ್ಮ ಪಕ್ಷದ ಪ್ರಶಂಸೆ ಸಹ ಮಾಡಿದ್ರು ಸಿದ್ದರಾಮಯ್ಯ.
ಕಾಂಗ್ರೆಸ್ ಗೆ ALWAYS WELCOME
ಸಿದ್ದರಾಮಯ್ಯನವರು ತಮ್ಮ ಪಕ್ಷದ ಬಗ್ಗೆ ಹೇಳುತ್ತಾ, ನಾವು ಯಾವ ಆಪರೇಷನ್ ಮಾಡಲ್ಲ, ಯಾರನ್ನೂ ಬಲವಂತವಾಗಿ ಪಕ್ಷಕ್ಕೆ ಕರೆತರಲ್ಲ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ, ಪಕ್ಷಕ್ಕೆ ಬದ್ಧರಾಗಿ ಇರುತ್ತೇನೆಂದು ಬರುವವರಿಗೆ ಪಕ್ಷದಲ್ಲಿ ಅವಕಾಶ ಇದೆ ಎಂದು ತಮ್ಮ ಪಕ್ಷಕ್ಕೆ ಸ್ವಾಗತಿಸಿದ್ದಾರೆ.

























Discussion about this post