ಬೆಂಗಳೂರು: ಸ್ಯಾಂಡಲ್ ವುಡ್ ನಟರಾದ ದೊಡ್ಡಣ್ಣ ಅವರು ಬೆಂಗಳೂರಿನ ಜಯದೇವಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ದೊಡ್ಡಣ್ಣ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ತುರ್ತು ಚಿಕಿತ್ಸಾ ಘಟದಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಶಾಶ್ವತ ಫೇಸ್ ಮೇಕರ್ ಅಳವಡಿಸಲಾಗಿದೆ.
ಈ ಹಿಂದೆ ಅವರಿಗೆ ಹೃದಯ ಸಮಸ್ಯೆಯ ಹಿನ್ನೇಲೆಯಲ್ಲಿ ಫೇಸ್ ಮೇಕರ್ ಅಳವಡಿಸಿದ್ದರು, ಇದೀಗ ಶಸ್ತ್ರ ಚಿಕಿತ್ಸೆ ನಡೆಸಿ ಶಾಶ್ವತ ಫೇಸ್ ಮೇಕರ್ ಅಳವಡಿಸಲಾಗಿದೆ. ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ದೊಡ್ಡಣ್ಣ ಅವರು ಆರೋಗ್ಯವಾಗಿದ್ದಾರೆ, ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂಧಿಸುತ್ತಿದ್ದಾರೆ ಎಂದು ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇನ್ನು ಮೂರು ದಿನಗಳ ನಂತರ ಆಸ್ಪತ್ರೆಯಿಂದ ಡಿಸ್ ಚಾರ್ಚ್ ಆಗಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿರುವುದರಿಂದ ಅಭಿಮಾನಿಗಳು ಸ್ವಲ್ಪಮಟ್ಟಿಗೆ ಆತಂಕದಿಂದ ಹೊರಗೆ ಬಂದಿದ್ದಾರೆ.
Discussion about this post