ಚಿಕ್ಕಮಗಳೂರು: ದೇಶದಲ್ಲಿ ಅಗತ್ಯ ವಸ್ತುಗಳು, ಮತ್ತು ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮತ್ತು ಖಾಸಗೀಕರಣ ವಿರೋಧಿಸಿ ದಲಿತ ಸಂಘರ್ಷ ಸಮಿತಿ ಸಾಗರ ಬಣದ ಕಾರ್ಯಕರ್ತರು ಗುರುವಾರ ನಗರದ ಆಜಾದ್ ಪಾರ್ಕ್ ವೃತ್ತದ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಧರಣಿ ನಡೆಸಿದರು. ಜಿಲ್ಲಾ ಸಂಚಾಲಕ ಬಾಲ ಕೃಷ್ಣ ಬಿಳೇಕಲ್ಲು ಮಾತನಾಡಿ ದೇಶದ ಜನತೆ ಕೋವಿಡ್ ಸಂಕಷ್ಟಕ್ಕೆ ಸಿಲುಕಿ ಆರ್ಥಿಕವಾಗಿ ತತ್ತರಿಸಿಹೋಗಿದ್ದಾರೆ ಈ ನಡುವೆ ಬಡವರ ನೆರವಿಗೆ ಬರಬೇಕಾದ ಸರ್ಕಾರ ಅಗತ್ಯ ವಸ್ತುಗಳ ಬೆಲೇ ಏರಿಕೆ, ಪೆಟ್ರೋಲ್, ಡೀಸೆಲ್ ಏರಿಕೆ ಮಾಡಿ ಜನತೆ ಜನ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಳ ಸಂತೆಗೆ ನೆರವಾಗುವಂತೆ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಈ ಹಿಂದೆ ಅಡುಗೆ ಅನಿಲಕ್ಕೆ ನೀಡುತ್ತಿದ್ದ ಸಬ್ಸಿಡಿ ದರವನು ಹಿಂಪಡೆಯಲಾಗಿದೆ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಗೊಳಿಸುವ ಮೂಲಕ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ಸಾಗರ ಬಣದ ಡಿಎಸ್‌ಎಸ್ ತಾಲ್ಲೂಕು ಸಂಚಾಲಕ ಸತೀಶ್ ಕೂದುವಳ್ಳಿ, ಡಿಎಸ್‌ಎಸ್ ಸಮಿತಿಯ ಜಿಲ್ಲಾ ಮಹಿಳಾ ಸಂಚಾಲಕಿ ಗೀತಾಪುಟ್ಟಪ್ಪ, ಜಲಜಾ, ಸಂಚಾಲಕ ಶಿವಣ್ಣ, ಸೋಮಶೇಖರ್, ತುಡುಕೂರು ಯೋಗೇಶ್ ಸೇರಿದಂತೆ ಮತ್ತಿತರರು ಇದ್ದರು.

























Discussion about this post