ಚಿಕ್ಕಮಗಳೂರು: ಭದಾ ಉಪಕಣಿವೆಯಿಂದ ಜಿಲ್ಲೆಯ ಕಡೂರು, ತರೀಕೆರೆ, ಚಿಕ್ಕಮಗಳೂರಿನ ಲಕ್ಯಾ ಭಾಗಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೊದಲ ಹಂತದ ಕಾಮಗಾರಿಗೆ ಅಕ್ಟೋಬರ್ 16 ರಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.
ಅವರು ಕಡೂರಿನ ಚಿಕ್ಕದೇವನೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿ ೩೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರು ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಜಲಜೀವನ್ ಮಿಷನ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಗ್ರಾಮಗಳ ಪ್ರತಿ ಮನೆ ಮನೆಗೂ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಬೇಕು ಎನ್ನುವ ದೃಢ ಸಂಕಲ್ಪ ಹೊಂದಿದ್ದು ಅದನ್ನು ಸಕಾರಗೊಳಿಸುವ ನಿಟ್ಟಿನಲ್ಲಿ ಎಲ್ಲೆಡೆ ಕಾರ್ಯಾರಂs ಚಾಲನೆಯಾಗುತ್ತಿದೆ ಎಂದು ತಿಳಿಸಿದರು.
ಪ್ರಧಾನಿಮಂತ್ರಿ ನರೇಂದ್ರ ಮೋದಿಯವರು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿದ್ದು ಸುಮಾರು ೧೪೦೦ ಕೋಟಿಗೂ ಹೆಚ್ಚು ಅನುದಾನವನ್ನು ಕೇಂದ್ರದಿಂದ ಬಿಡುಗಡೆಗೊಳಿಸಿದ್ದಾರೆ. ೧೨೮೧ ಕೋಟಿ ವೆಚ್ಚದ ಭದ್ರಾ ಕಣಿವೆಯಿಂದ ಕಡೂರು, ತರೀಕೆರೆ, ಚಿಕ್ಕಮಗಳೂರು ಭಾಗದ ಜನತೆಗೆ ಕುಡಿಯುವ ನೀರು ಪೂರೈಕೆಗೆ ಈಗಾಗಲೇ ಟೆಂಡರ್ ಆಗಿದ್ದು ಅಕ್ಟೋಬರ್ ೧೬ ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ೪೦೦ ಕೋಟಿ ವೆಚ್ಚದ ಮೊದಲ ಹಂತದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಪ್ರತಿ ಮನೆಗೂ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆಗೆ ಜೆಜೆಎಂ ಅಡಿಯಲ್ಲಿ ಅನುದಾನ ಬಿಡುಗಡೆಗೊಳಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಅದರಂತೆ ಮಾಚಗೊಂಡನಹಳ್ಳಿ ಗ್ರಾಮದಲ್ಲಿ ೩೦ ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಘಟಕ ಆರಂಭವಾಗಲಿದ್ದು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಎಂದು ತಿಳಿಸಿದರು.
ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಪ್ರಧಾನಿಗಳು ಬಡವರ ಪರವಾಗಿ ವಿಶೇಷ ಕಾಳಜಿ ಹೊಂದಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಉಚಿತ ಪಡಿತರ, ನೀಡಿದ್ದಾರೆ. ಪ್ರತಿಯೊಬ್ಬರಿಗೂ ಉಚಿತ ಲಸಿಕೆ, ಸೇರಿದಂತೆ ಹಲವಾರ ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದಾರೆ ಇದೀಗ ರೈತರ ಪರವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದ್ದು ವಿರೋಧ ಪಕ್ಷಗಳು ಅದನ್ನು ರೈತವಿರೋಧಿ ಎಂದು ರೂಪಿಸಲು ಹುನ್ನಾರ ನಡೆಸಿವೆ ಎಂದು ಟೀಕಿಸಿದರು.
ಜಿಲ್ಲಾಪಂಚಾಯಿತಿ ಮಾಜಿ ಉಪಾಧ್ಯಕ್ಷ ವಿಜಯ್‌ಕುಮಾರ್ ಮಾತನಾಡಿ ಶಾಸಕರು ಚಿಕ್ಕದೇವನೂರು ವ್ಯಾಪ್ತಿಯ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಆಧ್ಯತೆ ನೀಡಿದ್ದಾರೆ. ಮನೆ ಮನೆಗೂ ಕುಡಿಯುವ ನೀರು ಸಿಗಬೇಕು ಎಂಬ ಕೇಂದ್ರದ ಸಂಕಲ್ಪದಂತೆ ಇಂದು ೩೦ ಲಕ್ಷ ವೆಚ್ಚದಲ್ಲಿ ಕುಡಿಯುವ ನೀರು ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಶಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೊಂಡಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ, ಚಿಕ್ಕದೇವನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಅಶೋಕ್, ದೇವನೂರು ಪಂಚಾಯಿತಿ ಅಧ್ಯಕ್ಷ ಆನಂದ್, ಉಪಾಧ್ಯಕ್ಷ ಷಣ್ಮುಕಪ್ಪ, ವಿಎಸ್‌ಎಸ್ ಅಧ್ಯಕ್ಷ ರವಿ, ಪಂಚಾಯಿತಿ ಮಾಜಿ ಅಧ್ಯಕ್ಷ ಇಂದ್ರೇಶ್, ಹರೀಶ್, ಶಂಕರಪ್ಪ, ಜಗದೀಶ್, ಹಾಗೂ ಗ್ರಾಮಪಂಚಾಯಿತಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

























Discussion about this post