ಚಿಕ್ಕಮಗಳೂರು : ಮಗನ ಸ್ನೇಹಿತೆಯ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಘಟನೆ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಕಡಬಗೆರೆ ಚಂದ್ರ ಎಂಬಾತನನ್ನು ಪೊಲೀಸರು ಸೆರೆಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತನ್ನ ಮಗಳು ಅಪ್ರಾಪ್ತೆಯಾಗಿದ್ದು ಆಕೆ ತನ್ನ ಸ್ನೇಹಿತನ ಮನೆಗೆ ಹೋಗಿದ್ದಾಗ, ಸ್ನೇಹಿತ ಇರಲಿಲ್ಲ, ಆತನ ತಂದೆ ಆಕೆಯನ್ನು ಉಳಿದುಕೊಳ್ಳಲು ಹೇಳಿ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























Discussion about this post