ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜನಾರ್ಧನ ರೆಡ್ಡಿ ಅವರ ಆರೋಗ್ಯದಲ್ಲಿ ಸೋಮವಾರ ಮುಂಜಾನೆ ಏರು ಪೇರಾಯಿತು. ತಕ್ಷಣವೇ ಅವರನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜನಾರ್ಧನ ರೆಡ್ಡಿ ಅವರು ಆ್ಯಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಜನಾರ್ಧನ ರೆಡ್ಡಿ ಅವರ ಆರೋಗ್ಯದಲ್ಲಿ ಉತ್ತಮ ಸ್ಥಿತಿ ಕಂಡು ಬಂದರೆ ಡಿಸ್ಚಾರ್ ಆಗಲಿದ್ದಾರೆ. ಇಲ್ಲ ಅಂದರೆ ಇನ್ನಷ್ಟು ದಿನ ಆಸ್ಪತ್ರೆಯಲ್ಲೆ ಚಿಕಿತ್ಸೆ ಪಡೆಯಬೇಕಾಗುತ್ತದೆ.

























Discussion about this post