ಮೈಸೂರು: ಮೈಸೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಸಾಂಸ್ಕೃತಿಕ ನಗರಿಯನ್ನು ತಲ್ಲಣಿಸುವಂತೆ ಮಾಡಿದೆ. ನಿನ್ನೆಯಷ್ಟೇ ಶೂಟೌಟ್ ನಿಂದ ಸುಧಾರಿಸಿಕೊಳ್ಳುವ ಮೊದಲೇ ಈ ಪ್ರಕರಣ ಬಯಲಿಗೆ ಬಂದಿದೆ.
ಹೊರ ರಾಜ್ಯದಿಂದ ಎಂಬಿಎ ಕಲಿಯಲು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ಬಳಿ ಹೋಗಿದ್ದಾಗ ಐದಾರು ಮಂದಿ ಇದ್ದ ಯುವಕರ ತಂಡ ಸಾಮೂಹಿಕ ಅತ್ಯಾಚಾರ ನಡೆಸಿದೆ ಎಂದು ತಿಳಿದು ಬಂದಿದೆ.
ಆಲನ ಹಳ್ಳಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಲನಹಳ್ಳಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ಗುಂಪು ಯುವತಿಯೊಂದಿಗೆ ಬಂದಿದ್ದ ಯುವಕನನ್ನು ಥಳಿಸಿ, ಈ ಕೃತ್ಯ ಎಸಗಿದ್ದಾರೆ. ಆಲನಹಳ್ಳಿ ಪೊಲೀಸರು ಅಪರಾಧಿಗಳನ್ನು ಪತ್ತೆ ಹಚ್ಚಲು ತನಿಖೆ ಚುರುಕುಗೊಳಿಸಿದ್ದು,
ಸಂತ್ರಸ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಎಫ್ ಐ ಆರ್ ದಾಖಲಿಸಿರುವ ಪೊಲೀಸರು ಅತ್ಯಾಚಾರ ನಡೆಸಿರುವ ಯುವಕರು ಪರಿಚಿತರೇ? ಎಂಬುದರ ಬಗ್ಗೆ ಥಳಿತಕ್ಕೊಳಗಾದ ಯುವಕನಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

























Discussion about this post