ಚಿಕ್ಕಮಗಳೂರು: ಯುವಕರು ಪ್ರತಿದಿನ ಕನಿಷ್ಠ ೩೦ ನಿಮಿಷ ಆಟ, ಯೋಗ ಸೇರಿದಂತೆ ದೈಹಿಕ ಚಟುವಟಿಕೆಗಳನ್ನು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಎನ್.ರಮೇಶ್ ತಿಳಿಸಿದರು
ಅವರು ನಗರದ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ನೆಹರು ಯುವ ಕೇಂದ್ರವತಿಯಿಂದ ಅಯೋಜಿಸಲಾಗಿದ್ದ (ಮ್ಯಾರತಾನ್) ಓಟಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಮಾತನಾಡಿದರು.
ಈ ಮೂಲಕ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಮಹತ್ವಾಕಾಂಕ್ಷೆಯ ಯೋಜನೆಯಾದ ಫಿಟ್ ಇಂಡಿಯಾಗೆ ಯುವಕರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಯುವ ಅಧಿಕಾರಿ ಅಭಿಷೇಕ್ ಚವರೆ ಮಾತನಾಡಿ ಈಗಾಗಲೇ ನೆಹರು ಯುವ ಕೇಂದ್ರದಿಂದ ಜಿಲ್ಲೆಯಲ್ಲಿ ಸ್ವಚ್ಛತಾ ಅಭಿಯಾನ, ಕ್ಲೀನ್ ವಿಲೇಜ್, ಗ್ರೀನ್ ವಿಲೇಜ್, ಸೇರಿದಂತೆ ಅನೇಕ ಚಟುವಟಿಕೆಗಳನ್ನು ನಡೆಸಲಾಗಿತ್ತು ಎಂದರು.
ಇಂದು ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಫಿಟ್ ಇಂಡಿಯಾ ಫ್ರೀಡಂ ರನ್ ಆಯೋಜಿಸಲಾಗಿತ್ತು ಯುವಕರು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರಿಸಬೇಕು ಈ ಮೂಲಕ ಸದೃಢ ರಾಷ್ಟ್ರಕ್ಕೆ ಪಣ ತೊಡಬೇಕು ಎಂದು ಹೇಳಿದರು.
ನೆಹರು ಯುವ ಕೇಂದ್ರವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಫಿಟ್ ಇಂಡಿಯಾ ಫ್ರೀಡಮ್ರನ್ನ್ನು ಆಯೋಜಿಸಲಾಗಿತ್ತು. ಜಿಲ್ಲೆಯ ನೆಹರು ಯುವ ಕೇಂದ್ರದ ಸ್ವಯಂಸೇವಕರು ಕ್ರೀಡಾಂಗಣದಲ್ಲಿ ಮೂರು ಸುತ್ತು s ಓಡುವುದರ ಮೂಲಕ ಫಿಟ್ ಚಿಕ್ಕಮಗಳೂರು ಫಿಟ್ ಇಂಡಿಯಾ ಎಂದು ಘೋಷಣೆ ಕೂಗಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ರೂಪಕುಮಾರಿ, ಉಪವಿಭಾಗಾಧಿಕಾರಿ ಹೆಚ್ .ಎಲ್ ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುಳಾ ಹುಲ್ಲಹಳ್ಳಿ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಇಲಾಖೆಯ ಸೋಮಶೇಖರ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

























Discussion about this post