ಕೋಲಾರ: ಲಾರಿ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ 3 ಮಂದಿ ಸೇರಿದಂತೆ 8 ಎಮ್ಮೆಗಳು ಸಾವಿಗೀಡಾದ ಘಟನೆ ಜಿಲ್ಲೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಚಂಡಿಗಡ್ ದಿಂದ ಕೇರಳಕ್ಕೆ ಸೇಬು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹಾಗೂ ಹುಬ್ಬಳ್ಳಿಯಿಂದ ಎಮ್ಮೆಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನಗಳ ಮಧ್ಯೆ ಏಕಾಏಕಿ ಡಿಕ್ಕಿ ಹೊಡೆದ ಕಾರಣ ಈ ಅವಘಡ ನಡೆದಿದೆ.
ಈ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳದಲ್ಲಿ ಸಾವಿಗೀಡಾಗಿದ್ದು, ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾನೆ.
ಈ ಅಪಘಾತದಿಂದ ಲಾರಿಯಲ್ಲಿ ಸಿಲುಕಿದ ವ್ಯಕ್ತಿಯನ್ನು ಹೊರ ತೆಗೆಯಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಡುವಂತಾಯಿತು. ಸದರಿ ದುರ್ಘಟನೆಯಲ್ಲಿ ಮೃತರ ಹೆಸರು, ವಿಳಾಸ ಪತ್ತೆಯಾಗಿಲ್ಲ, ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

























Discussion about this post