• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ

ವಿಪಕ್ಷ ನಾಯಕರಾದ ಸಿದ್ದರಾಮಯ್ಯ

Shri News Desk by Shri News Desk
Oct 3, 2021, 07:13 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ನನ್ನ ತಂದೆ, ತಾಯಿ ಶಿಕ್ಷಣದಿಂದ ವಂಚಿತರಾಗಿದ್ದರು. ನಾನು ಕಾನೂನು ಪದವಿ ಗಳಿಸಿದ್ದಕ್ಕೆ ಇಂದು ಸಮಾಜದಲ್ಲಿ ಗಟ್ಟಿ ಧ್ವನಿಯಲ್ಲಿ ಮಾತನಾಡಲು ಸಾಧ್ಯವಾಗಿದೆ. ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂದು ಆಯೋಜಿಸಿದ್ದ ಗಾಣಿಗ ಸಮುದಾಯದ ಕಾರ್ಯಾಗಾರವನ್ನು ಉದ್ಘಾಟಿಸಿದ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ತಿಳಿಸಿದರು.

ಅವಕಾಶಗಳಿಂದ ವಂಚಿತವಾಗಿರುವ ಸಮುದಾಯಗಳು ತಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಪರಿಹಾರ ಕಂಡುಕೊಳ್ಳುವುದು ಇಂದಿನ ಕಾಲಘಟ್ಟದಲ್ಲಿ ಅತಿ ಅಗತ್ಯ. ಶತಮಾನಗಳ ಹಿಂದೆ ವ್ಯಕ್ತಿಯ ಕಾಯಕದ ಆಧಾರದ ಮೇಲೆ ಜಾತಿ ನಿರ್ಮಾಣ ಮಾಡಲಾಗಿದೆ. ಈ ಚತುರ್ವರ್ಣ ವ್ಯವಸ್ಥೆ ನಮ್ಮ ನಡುವೆ ಇನ್ನೂ ಜೀವಂತವಾಗಿದೆ. ಇಂದು ಶೋಷಿತ ಸಮುದಾಯಗಳು ಶಿಕ್ಷಣ ಪಡೆದಿರುವುದರಿಂದ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಮಾತನಾಡುವ ಧೈರ್ಯ ಬಂದಿದೆ. ಇಂತಹ ವ್ಯವಸ್ಥೆ ಹಿಂದೆ ಇರಲಿಲ್ಲ. ಕೆಲವರು ಜಾತಿ ಸಮ್ಮೇಳನಗಳನ್ನು ಮಾಡೋದು ತಪ್ಪು ಎನ್ನುತ್ತಾರೆ. ಮುಂದೆ ತಮ್ಮ ವಿರುದ್ಧವೇ ಧ್ವನಿ ಎತ್ತಬಹುದು ಎಂಬ ಹತಾಶೆ ಇದಕ್ಕೆ ಕಾರಣ ಎಂದು ಹೇಳಿದರು.

ಅವಕಾಶದಿಂದ ವಂಚಿತರಾದ ಜಾತಿಗಳು ಜಾತಿ ಸಮ್ಮೇಳನಗಳನ್ನು ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರೆ ಅದು ಜಾತೀಯತೆಯಾಗಲ್ಲ, ಸಮಾಜದ ಸಂಪತ್ತನ್ನು ಅನುಭವಿಸುವ ಸಮುದಾಯಗಳು ಜಾತಿ ಸಮ್ಮೇಳನಗಳನ್ನು ನಡೆಸಿದರೆ ಮಾತ್ರ ಅದು ಜಾತೀಯತೆ ಆಗುತ್ತದೆ ಎಂದು ಲೋಹಿಯಾ ಹೇಳಿದ್ದರು ಎಂದು ಲೋಹಿಯಾ ನೆನಪು ಮಾಡಿಕೊಂಡರು.

“ಶಿಕ್ಷಣ, ಸಂಘಟನೆ ಮತ್ತು ಹೋರಾಟ” ಎಂಬ ಮೂರು ಸೂತ್ರಗಳನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶೋಷಿತ ವರ್ಗದ ಜನರಿಗೆ ನೀಡಿದ್ದಾರೆ. ಒಂದು ವೇಳೆ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗದೆ ಹೋಗಿದ್ದರೆ ನಮಗೆ ಇಂಥಾ ಶ್ರೇಷ್ಠ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವು ಸಮಾನತೆಗೆ ಅವಕಾಶ ನೀಡಿರುವುದರಿಂದ ಇಂದು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಇಂಥವರ ಬಗ್ಗೆ ತಳ ಸಮುದಾಯಗಳು ಜಾಗ್ರತೆ ವಹಿಸಬೇಕು ಎಂದರು.

ಹಿಂದೆ ಮೀಸಲಾತಿ ವಿರೋಧಿಸುತ್ತಿದ್ದವರು ಈಗ ಅದರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ್ದಾರೆ. ಇದಕ್ಕೆ ಕಾರಣ ಸಮಾಜದ ಎಲ್ಲಾ ಜಾತಿಗಳು ಮೀಸಲಾತಿ ಅಡಿಯಲ್ಲಿ ಬಂದಿರುವುದು. ಮೀಸಲಾತಿ ಈಗ 60% ಆಗಿದೆ. ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೂ 10% ಮೀಸಲಾತಿ ಕಲ್ಪಿಸಲಾಗಿದೆ. 1992ರಲ್ಲಿ ಇಂದಿರಾ ಸಹಾನಿ ಪ್ರಕರಣದಲ್ಲಿ 9 ಮಂದಿ ನ್ಯಾಯಾಧೀಶರ ವಿಭಾಗೀಯ ಪೀಠವು ಮಂಡಲ್ ಕಮಿಷನ್‌ ವರದಿಯನ್ನು ಎತ್ತಿಹಿಡಿದಿತ್ತು. ಈ ವರದಿ ಜಾರಿಯಾದ ಮೇಲೆ ಹಿಂದುಳಿದ ಜಾತಿಗಳಿಗೆ 27% ಮೀಸಲಾತಿ ಸಿಕ್ಕಿತ್ತು. ಇದು ಜಾರಿಯಾಗಬಾರದು ಎಂದು ವಿರೋಧ ಮಾಡಿದವರು ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಎಂದು ಮಿಸಲಾತಿ ಹಿನ್ನೇಲೆ ತಿಳಿಸಿದರು.

ಕರ್ನಾಟಕದಲ್ಲಿ ಮೊದಲ ಬಾರಿಗೆ ಮೀಸಲಾತಿ ನೀಡಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಒಡೆಯರ್ ಅವರು ಮಿಲ್ಲರ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿ, ಅದರ ಶಿಫಾರಸನ್ನು ಜಾರಿ ಮಾಡಿದರು. ಬ್ರಾಹ್ಮಣರಿಗೆ 25%, ಬ್ರಾಹ್ಮಣೇತರರಿಗೆ 75% ಮೀಸಲಾತಿ ನೀಡಿದರು. ಇದನ್ನು ಸ್ವಾತಂತ್ರ್ಯ ಬಂದ ಮೇಲೆ ತೆಗೆದುಹಾಕಲಾಯಿತು. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿಯಾದ ದೇವರಾಜ ಅರಸು ಅವರು ಮೀಸಲಾತಿ ಸಂಬಂಧ ಆಯೋಗ ರಚನೆ ಮಾಡಿ, ಅದರ ಶಿಫಾರಸ್ಸಿನಂತೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಜಾರಿ ಮಾಡಿದರು ಎಂದು ತಿಳಿಸಿದರು.

ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿ ತಂದು ರಾಜಕೀಯ ಮೀಸಲಾತಿಯನ್ನು ಘೋಷಿಸಿದರು. ನಂತರ ಇದು ನರಸಿಂಹ ರಾವ್ ಅವರ ಕಾಲದಲ್ಲಿ ಜಾರಿಯಾಯಿತು. ಕಾಂಗ್ರೆಸ್ ಪಕ್ಷ ಹಿಂದುಳಿದವರಿಗೆ, ಮಹಿಳೆಯರಿಗೆ ಮೀಸಲಾತಿ ನೀಡಿದಾಗ ಅದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದವರು ಬಿಜೆಪಿಯ ರಾಮಾ ಜೋಯ್ಸ್. ಆದರೆ ಸುಪ್ರೀಂ ಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು ಎಂದರು.

ಸರ್ಕಾರಿ ಹಾಸ್ಟೆಲ್ ಗಳಲ್ಲಿ ಸೀಟ್ ಸಿಗದ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು ರೂ.1500 ನೀಡುವ ವಿದ್ಯಾಸಿರಿ ಯೋಜನೆ ಜಾರಿಮಾಡಿದ್ದೆ. ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಮೇಲೆ ಈ ಯೋಜನೆಯನ್ನು ನಿಲ್ಲಿಸಿದೆ. ಬಿಜೆಪಿ ಪಕ್ಷ ಹಿಂದುಳಿದ ಸಮಾಜಕ್ಕೆ ಮೇಲಿಂದ ಮೇಲೆ ಅನ್ಯಾಯ ಮಾಡುತ್ತಿದ್ದರೂ ಪ್ರಶ್ನೆ ಮಾಡದೆ ಸುಮ್ಮನಿದ್ರೆ ಹೇಗೆ? ಎಂದು ಪ್ರಶ್ನಿಸಿದರು.

ಅರ್ಜುನ್ ಸಿಂಗ್ ಅವರು ಉನ್ನತ ಶಿಕ್ಷಣದಲ್ಲೂ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಬೇಕು ಎಂದು ಆದೇಶ ಹೊರಡಿಸಿದರು. ಬಸವಣ್ಣ, ಬುದ್ಧ ಜಾತಿ ವ್ಯವಸ್ಥೆ ಅಳಿದು ಸಮ ಸಮಾಜ ನಿರ್ಮಾಣವಾಗಬೇಕು ಎಂದು ಸಾರಿದರು. ಇದೇ ಕಾರಣಕ್ಕೆ ಬಸವಣ್ಣ ಅನುಭವ ಮಂಟಪ ನಿರ್ಮಾಣ ಮಾಡಿದ್ದರು. ಇಂದು ಇವ ನಮ್ಮವ, ಇವ ನಮ್ಮವ ಎನ್ನುತ್ತಲೇ ನಿನ್ನ ಜಾತಿ ಯಾವುದು ಎಂದು ಕೇಳುತ್ತಾರೆ. ಇದು ಸಮಾಜದ ವಾಸ್ತವ ಸ್ಥಿತಿ ಎಂದು ಅವರು ತಿಳಿಸಿದರು.

ನಾನು ಕಷ್ಟಪಟ್ಟು ಮೀಸಲಾತಿ ರಥವನ್ನು ಇಲ್ಲಿಯವರೆಗೆ ಎಳೆದು ತಂದಿದ್ದೇನೆ. ಸಾಧ್ಯವಾದರೆ ಮುಂದಕ್ಕೆ ಎಳೆಯಿರಿ, ಇಲ್ಲವಾದರೆ ಅಲ್ಲಿಯೇ ಬಿಟ್ಟುಬಿಡಿ, ದಯವಿಟ್ಟು ರಥವನ್ನು ಹಿಂದಕ್ಕೆ ಮಾತ್ರ ಎಳೆಯಬೇಡಿ ಎಂದು ಮನವಿ ಮಾಡಿದರು.

1931 ರಲ್ಲಿ ಕಡೇ ಬಾರಿ ಜಾತಿಗಣತಿ ಆಗಿತ್ತು. ಮೀಸಲಾತಿ ವಿಚಾರ ನ್ಯಾಯಾಲಯದ ಮುಂದೆ ಬಂದಾಗಲೆಲ್ಲ ಜಾತಿ ಜನಸಂಖ್ಯೆಗೆ ಸಂಬಂಧಿಸಿದಂತೆ ನಿಮ್ಮ ಬಳಿಯಿರುವ ಅಧಿಕೃತ ದಾಖಲೆ ಏನು ನ್ಯಾಯಾಲಯ ಪ್ರಶ್ನಿಸುತ್ತಿತ್ತು. ಈ ಕಾರಣಕ್ಕೆ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶಿಸಿದ್ದೆ. ಯಾವ ಜಾತಿಗೂ ಅನ್ಯಾಯ ಮಾಡುವುದು ಈ ಸಮೀಕ್ಷೆಯ ಉದ್ದೇಶವಲ್ಲ. ಜಾತಿ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮ ರೂಪಿಸುವುದು ಇದರ ಮುಖ್ಯ ಉದ್ದೇಶ ಎಂದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ವರದಿ ಸಿದ್ದಗೊಂಡಿರಲಿಲ್ಲ. ಈಗ ವರದಿ ಸಿದ್ದವಾಗಿದೆ. ಇದನ್ನು ಈಗಿನ ಸರ್ಕಾರವೂ ಸ್ವೀಕರಿಸುವಂತೆ ಕಾಣುತ್ತಿಲ್ಲ ಹಾಗಾಗಿ ನಾವು ಮತ್ತೆ ಅಧಿಕಾರಕ್ಕೆ ಬಂದಮೇಲೆ ವರದಿ ಸ್ವೀಕರಿಸುತ್ತೇವೆ. ಈಗಿನ ಯಾವ ಸರ್ಕಾರಗಳಿಗೂ ಬದ್ಧತೆಯಿಲ್ಲ ಎಂದು ಕಿಡಿಕಾರಿದರು.

ಗಾಣಿಗರು ಬಹಳ ಹಿಂದುಳಿದ ಸಮಾಜದವರು. ಈಗ ಆಧುನಿಕ ಯಂತ್ರಗಳು ಬಂದಮೇಲೆ ಈ ಸಮಾಜದ ಉದ್ಯೋಗವನ್ನು ಕಸಿದುಕೊಂಡಿದೆ. ಈ ಸಮಾಜದವರು ಬರೀ ಎಣ್ಣೆ ತೆಗಿಯುವ ಉದ್ಯೋಗಕ್ಕೆ ಜೋತುಬೀಳದೆ ಶಿಕ್ಷಣದ ಕಡೆಗೆ ಹೆಚ್ಚು ಮಹತ್ವ ನೀಡಿ, ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ಪಡೆಯುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಜಾತಿಯಿಂದ ಯಾರೂ ಬುದ್ದಿವಂತರೂ ಅಲ್ಲ, ದೊಡ್ಡವರೂ ಅಲ್ಲ. ರಾಮಾಯಣ, ಮಹಾಭಾರತ ಬರೆದವರು ಕೂಡ ಸಮಾಜದಿಂದ ಶೋಷಣೆಗೊಳಪಟ್ಟ ಜಾತಿಗೆ ಸೇರಿದವರೆ. ಹೀಗಾಗಿ ಜಾತಿಯಿಂದ ಜ್ಞಾನ, ಸಾಮರ್ಥ್ಯ ನಿರ್ಧಾರಿತವಾಗಲ್ಲ ಎಂಬುದನ್ನು ಎಲ್ಲರೂ ನೆನಪಿನಲ್ಲಿಟ್ಟುಕೊಂಡು ಸಾಧನೆಯ ಕಡೆಗೆ ಗಮನ ನೀಡಬೇಕು ಎಂದು ಸಿದ್ದರಾಮಯ್ಯ ಕಿವಿಮಾತು ಹೇಳಿದರು.

Tags: Opposition leader Siddaramaiah
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In