ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಾಂದಿ – ವಾಟೇಗನಹಳ್ಳಿ, ಮೂಲಕ ಹಾದು ಹೋಗುವ ಬಸ್ಕಲ್ ವರೆಗೆ ಸುಮಾರು 9 ಕಿ.ಮೀ. ಕ್ರಮಿಸುವ ರಸ್ತೆಯಲ್ಲಿ 5 ಕಿ.ಮೀ. ಯಷ್ಟು ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳೇ ನಿರ್ಮಾಣವಾಗಿದೆ ರಸ್ತೆಯು ಸಂಪೂರ್ಣ ಹದಗೆಟ್ಟಿದೆ.
ಈ ರಸ್ತೆಯನ್ನು ಅವಲಂಬಿಸಿರುವ 20ಕ್ಕೂ ಹೆಚ್ಚು ಗ್ರಾಮಗಳ ಏಳು ಸಾವಿರಕ್ಕೂ ಹೆಚ್ಚು ಜನರು ಈ ಹೊಂಡದ ಹಳ್ಳವಾಗಿರುವ ರಸ್ತೆಯಲ್ಲಿ ಸಂಚರಿಸಬೇಕಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಶೃಂಗೇರಿ ಮತ್ತು ಬೇಲೂರಿಗೆ ಪ್ರವಾಸಿಗರು ಈ ರಸ್ತೆಯಲ್ಲಿ ಸಂಚರಿಸುತ್ತಾರೆ.
ಬಸ್ ಸಂಚಾರವೂ ಇಲ್ಲ: ರಸ್ತೆ ಹದಗೆಟ್ಟಿದ್ದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸನ್ನು ಕೂಡ ಸ್ಥಗಿತಗೊಳಿಸಲಾಗಿದೆ.ಕಳೆದ 1989ರಿಂದ ಆರಂಭವಾಗಿದ್ದ ಚಿಕ್ಕಮಗಳೂರು-ಗೆಂಡೇಹಳ್ಳಿ ಬಸ್ ಸಂಚಾರ ಈ ಎರಡು ವರ್ಷಗಳಿಂದ ಇಲ್ಲದೆ, ವಿದ್ಯಾರ್ಥಿಗಳು, ಗ್ರಾಮಸ್ಥರಿಗೆ ತುಂಬಾ ಅನಾನುಕೂಲ ಉಂಟಾಗಿದೆ. ರೋಗಿಗಳ, ಗರ್ಭಿಣಿಯರ ಪಾಡು ಯಾರಿಗೂ ಬೇಡವಾಗಿದೆ.
ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ರಸ್ತೆ ದುರಸ್ತಿಗೆ ಮನವಿ ಸಲ್ಲಿಸಿದಾಗ ಸೂಕ್ತ ಕ್ರಮಕ್ಕಾಗಿ ಸರ್ಕಾರದಿಂದ ಲೋಕೋಪಯೋಗಿ ಇಲಾಖೆಗೆ ಸೂಚನೆ ಬಂದಿತ್ತು. ಆದರೆ ಇಲಾಖೆ ಅಧಿಕಾರಿಗಳು ಇದುವರೆಗೂ ರಸ್ತೆ ನಿರ್ವಹಣೆ ಕಾಮಗಾರಿ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಾ ಬಂದಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸುಮಾರು 12 ಕೋಟಿ ಅಂದಾಜು ವೆಚ್ಚದಲ್ಲಿ ಹಾಂದಿ-ಬಸ್ಕಲ್ ರಸ್ತೆ ಅಭಿವೃದ್ಧಿಗೊಳಿಸಲು ಸೂಚಿಸಿದ್ದರು. ಆದರೆ ನಂತರ ಬಂದ ಸರ್ಕಾರ ಮತ್ತು ಇಲಾಖೆಯ ನಿರ್ಲಕ್ಷ್ಯತನದ ಪರಿಣಾಮ ಈ ರಸ್ತೆಯ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ ಎನ್ನಲಾಗುತ್ತಿದೆ.

























Discussion about this post