ಹಾವೇರಿ: ಸಿಎಂ ಬೊಮ್ಮಾಯಿಯವರು ಹಾವೇರಿ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಭಾಗವಹಿಸಿದ್ದಂತಹ ಕಾರ್ಯಕ್ರಮದಲ್ಲಿ ಖದೀಮರು ಸಹ ತಮ್ಮ ಆಟ ತೋರಿಸಿದ್ದು, ಸುಮಾರು ೧.೫೦ ಲಕ್ಷ ಎಗರಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಣಿಬೆನ್ನೂರು ಎಪಿಎಂಸಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮ ಇದಾಗಿದ್ದು, ಸುಮಾರು ೧೩ ಜನರ ಜೇಬಿಗೆ ಕಳ್ಳರು ಕೈ ಹಾಕಿದ್ದಾರೆ. ಆದರೆ ಯಾರೂ ಸಹ ಪ್ರಕರಣ ದಾಖಲಿಸಿಲ್ಲ ಎಂಬುದು ಗಮನಾರ್ಹ ವಿಷಯ.
ಹಾವೇರಿಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ, ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಸುದ್ಧಿಗಾರರಿಗೆ ತಿಳಿಸಿದರು.

























Discussion about this post