ಬೆಂಗಳೂರು: ಗಣೇಶೋತ್ಸವದ ಸಂದರ್ಭದಲ್ಲಿ ಕೊರೊನಾ ಹರಡದಂತೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.
ಇದೇ ವೇಳೆ ಅವರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಭೂತಪೂರ್ವ ವಿಜಯ ಸಿಕ್ಕಿದೆ. ಸುಮಾರು 25 ವರ್ಷಗಳ ಬಳಿಕ ಸ್ವತಂತ್ರವಾಗಿ ಆಡಳಿತ ನಡೆಸಲು ಜನ ಅವಕಾಶ ನೀಡಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಈ ಫಲಿತಾಂಶ ಬಂದಿದ್ದು, ಜನರು ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ಆಡಳಿತವನ್ನು ಜನರು ಮೆಚ್ಚಿದ್ದಾರೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದಿದ್ದಾರೆ.
ಇದೇ ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ವಯಸ್ಕರಿಗೂ ಕೋವಿಡ್ ಎರಡು ಡೋಸ್ ಲಸಿಕೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಲಸಿಕೆ ಅಭಿಯಾನಕ್ಕೆ ವೇಗ ನೀಡುವ ಬಗ್ಗೆ ಹಾಗೂ ಈ ತಿಂಗಳೊಳಗೆ ಎಲ್ಲರಿಗೂ ಮೊದಲ ಡೋಸ್ ಪೂರ್ಣಗೊಳಿಸಲು ಸೂಚಿಸಲಾಗಿದೆ. ಜತೆಗೆ ಕೊರೊನಾ ಪರೀಕ್ಷೆ, ಆಕ್ಸಿಜನ್ ಘಟಕ ಆರಂಭ, ಸಿವಿಲ್ ಕಾರ್ಯ ಮೊದಲಾದವುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದವರು ಹೇಳಿದರು.
ಕೇರಳದಲ್ಲಿ ಒಬ್ಬ ಬಾಲಕನಲ್ಲಿ ನಿಫಾ ವೈರಸ್ ಸೋಂಕು ಕಂಡುಬಂದಿದೆ. ಅದು ರಾಜ್ಯಕ್ಕೆ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಗಡಿ ಭಾಗಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಇದೇ ಸಂಧರ್ಭದಲ್ಲಿ ಮಾಹಿತಿ ನೀಡಿದರು

























Discussion about this post