ರಾಜ್ಯದಿಂದ ಸುಪ್ರೀಂಗೆ ತಂದೆ ಮಗನ ರೂಪದಲ್ಲಿ ನ್ಯಾ.ಎಸ್ ಕೆ ಹೆಗ್ಡೆ ಮತ್ತು ನ್ಯಾ. ಸಂತೋಷ್ ಹೆಗ್ಡೆ ಹೋಗಿದ್ದರು. ತಂದೆ-ಮಗಳ ರೂಪದಲ್ಲಿ ನ್ಯಾ. ವೆಂಕಟರಾಮಯ್ಯ ಮತ್ತು ನಾನು ಹೋಗಿದ್ದೇವೆ ಎಂದು ವೈಶಿಷ್ಟ್ಯತೆ ನೆನೆದ ನ್ಯಾ. ನಾಗರತ್ನ.
ಒಂದೊಮ್ಮೆ ಕೋವಿಡ್ ಮೂರನೇ ಅಲೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಮುನ್ನೋಟ ಕೈಪಿಡಿ (ವಿಷನ್ ಸ್ಟೇಟ್‌ಮೆಂಟ್) ಸಿದ್ಧಪಡಿಸಬೇಕು. ಕರ್ನಾಟಕ ಹೈಕೋರ್ಟ್‌ನಲ್ಲಿ ಅಳವಡಿಸಿಕೊಂಡಿರುವ ಹೈಬ್ರಿಡ್ ಮಾದರಿಯನ್ನು ಜಿಲ್ಲಾ ಮತ್ತು ವಿಚಾರಣಾಧೀನ ನ್ಯಾಯಾಲಯಗಳಿಗೆ ವಿಸ್ತರಿಸಬೇಕು. ಇದನ್ನು ಸಾಧ್ಯವಾಗಿಸಿದರೆ ಇಡೀ ದೇಶದಲ್ಲಿ ಕರ್ನಾಟಕದ ನ್ಯಾಯಾಂಗವು ಅತ್ಯುತ್ತಮ ಸೇವೆಗಳನ್ನು ಹೊಂದಿದ ವ್ಯವಸ್ಥೆ ಎನಿಸಿಕೊಳ್ಳಲಿದೆ” ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ಹೊಂದಿರುವ ಕರ್ನಾಟಕ ಹೈಕೋರ್ಟ್‌ನ ನಿಕಟಪೂರ್ವ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾ. ಬಿ ವಿ ನಾಗರತ್ನ ಅವರಿಗೆ ಬೆಂಗಳೂರು ವಕೀಲರ ಸಂಘವು ಶನಿವಾರ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.
ಹೈಕೋರ್ಟ್‌ನಲ್ಲಿ ಆರಂಭಿಸಲಾಗಿರುವ ಇ-ಕೇಂದ್ರಗಳನ್ನು ಸಣ್ಣಪುಟ್ಟ ಕೆಲಸಗಳಿಗೆ ಸೀಮಿತಗೊಳಿಸದೇ ಅತ್ಯುತ್ತಮ ಸೌಲಭ್ಯ ಹಾಗೂ ಇಂಟರ್‌ನೆಟ್ ವ್ಯವಸ್ಥೆ ಕಲ್ಪಿಸಿ ವಕೀಲರು ಅಲ್ಲಿಂದಲೇ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು. ಇದು ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳಿಗೂ ವಿಸ್ತರಣೆಯಾಗಬೇಕು. ವಿಡಿಯೊ ಕಾನ್ಫರೆನ್ಸ್ ಮೂಲಕ ಸಾಕ್ಷ್ಯ ನುಡಿಯುವ ವ್ಯವಸ್ಥೆ ಬಲಪಡಿಸಬೇಕು” ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಮೂರು ದಿನಗಳಷ್ಟೇ ಕೆಲಸ ಮಾಡಿದ್ದೇನೆ. ಆದರೆ, ಇಲ್ಲಿನ ವಿಡಿಯೊ ಕಾನ್ಫರೆನ್ಸ್‌ಗೂ ಅಲ್ಲಿನ ವಿಡಿಯೊ ಕಾನ್ಫರೆನ್ಸ್‌ಗೂ ಸಾಕಷ್ಟು ವ್ಯತ್ಯಾಸವಿದೆ. ಇದೇ ಉತ್ತಮ ಎಂದು ನನಗನ್ನಿಸಿದೆ” ಎಂದೂ ನ್ಯಾ. ಓಕಾ ಈ ವೇಳೆ ಅಭಿಪ್ರಾಯಪಟ್ಟರು.
ವರದಿ- ಸಿದ್ದೇಶ್ ಎಂಎಸ್, ಬಾರ್ ಅಂಡ್ ಬೆಂಚ್.

























Discussion about this post