ಬೆಂಗಳೂರು: ಇತ್ತೀಚೆಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಆರ್ ಎಸ್ಎಸ್ ಬಗ್ಗೆ ಹೆಚ್ಚು ಮಾತನಾಡುತ್ತಿದ್ದಾರೆ. ಅವರಿಬ್ಬರ ನಡುವೆ ಅಲ್ಪಸಂಖ್ಯಾತ ಮತಗಳನ್ನು ಸೆಳೆಯಲು ಸ್ಪರ್ಧೆ ನಡೆಯುತ್ತಿದೆ. ಅಲ್ಪಸಂಖ್ಯಾತ ಮತಗಳಿಗೆ ಸಿದ್ದರಾಮಯ್ಯ, ಕುಮಾರಸ್ವಾಮಿ ಹಲ್ಲು ಗಿಂಜುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ಎಸ್ ಅನ್ನು ತೆಗಳುವುದರಿಂದ ಅಲ್ಪಸಂಖ್ಯಾತ ಮತಗಳನ್ನು ಯಾರು ಎಷ್ಟು ಪಡೆಯುತ್ತಾರೆಂದು ಸ್ಪರ್ಧೆಯಿದೆ. ಆರ್ ಎಸ್ಎಸ್ ಒಳ್ಳೆಯದು ಅಂತ ಅವರಿಗೂ ಗೊತ್ತಿದೆ. ಟೀಕೆ ಮಾಡುವುದರಿಂದ ಅರ್ಥ ಇಲ್ಲ. ಅಲ್ಪಸಂಖ್ಯಾತ ಸಮುದಾಯ ಒಲಿಸಿಕೊಳ್ಳಲು ಇಂಥ ಹೇಳಿಕೆ ಕೊಡುತ್ತಿದ್ದಾರೆ ಎಂದರು.
ಬಿನ್ನಿಮಿಲ್ ಪೊಲೀಸ್ ಕ್ವಾಟ್ರಸ್ ಬೀಳುವ ಹಂತದಲ್ಲಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿನ್ನಿಮಿಲ್ ಗೆ ಹೋಗಿ ಪರಿಶೀಲನೆ ಮಾಡುತ್ತೇನೆ. ಆ ಕಟ್ಟಡದ ಪರಿಸ್ಥಿತಿ ಗಮನಕ್ಕೆ ಬಂದಿದೆ. ಹಳೆಯ ಕಟ್ಟಡಗಳನ್ನು ಕೆಡವಿ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು. ಗೃಹ-2025 ಯೋಜನೆಯಡಿ ಹತ್ತು ಸಾವಿರ ಪೊಲೀಸ್ ಕ್ವಾಟ್ರಸ್ ಗಳ ನಿರ್ಮಾಣ ಮಾಡ್ತಿದ್ಧೇವೆ. ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಟೆಂಡರ್ ಸಹ ಮುಗಿದಿದೆ ಎಂದರು.
ಜನಸಂಖ್ಯಾ ನಿಯಂತ್ರಣ ಕಾನೂನು ಬೇಕು ಎಂಬ ಮೋಹನ್ ಭಾಗವತ್ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಮೋಹನ್ ಭಾಗವತ್ ಅವರು ಹೇಳಿರುವುದು ಸರಿ ಇದೆ ಎಂದರು.

























Discussion about this post