ಚಿಕ್ಕಮಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಂಯಿತಿ, ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಚಿಕ್ಕಮಗಳೂರು. ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣಾ ಸಮಾರಂಭವನ್ನು ಅ.೨೦ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಕುವೆಂಪು ಕಲಾ ಮಂದಿರ, ಕೆ,ಎಸ್,ಆರ್,ಟಿ,ಸಿ ಬಸ್ಸ್ ಸ್ಟ್ಯಾಂಡ್ ಹಿಂಭಾಗ, ಚಿಕ್ಕಮಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೇರವೆರಿಸಲಿದ್ದಾರೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಚಿವೆ ಕು ಶೋಭಾ ಕರಂದ್ಲಾಜೆ ಅವರು ಕಾರ್ಯಕ್ರಮದ ಗೌರವ ಘನ ಉಪಸ್ಥಿತಿವಹಿಸಲಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ನ ಉಪ ಸಭಾಪತಿ ಎಂ.ಕೆ ಪ್ರಾಣೇಶ್ ಶ್ರೀ ಮಹರ್ಷಿ ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚಣೆಯನ್ನು ಮಾಡಲಿದ್ದು, ಸಾರಿಗೆ ಮತ್ತು ಪರಿಶಿಷ್ಪ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ,ಎನ್ ಜೀವರಾಜ್ ರವರು ಕಾರ್ಯಕ್ರಮದ ಘನಉಪಸ್ಥಿತರಾಗಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಸಿ.ಟಿ ರವಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಜ್ವಲ್ ರೇವಣ್ಣ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಟಿ ರವಿ, ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಅಯನೂರು ಮಂಜುನಾಥ್, ಮೂಡಿಗೆರೆ ವಿಧಾನಸಭಾ ಕ್ಷೇತದ್ರ ಶಾಸಕರಾದ ಎಂ,ಪಿ, ಕುಮಾರ ಸ್ವಾಮಿ, ತರೀಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ.ಎಸ್ ಸುರೇಶ್, ಕಡೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬೆಳ್ಳಿ ಪ್ರಕಾಶ್, ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್ ಭೋಜೇಗೌಡ, ಚಿಕ್ಕಮಗಳೂರು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಜಿಲ್ಲಾಧ್ಯಕ್ಷ ಜಿ.ಕೆ ಭೀಮಪ್ಪ, ಮಹರ್ಷಿ ವಾಲ್ಮೀಕಿ ನಾಯಕ ಯುವಕ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ, ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಡ್ಡಾಯ ಹಾಜರಾತಿಗೆ ಜಿಲ್ಲಾಧಿಕಾರಿ ಸೂಚನೆ
ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ ೨೦ ರಂದು ಬೆಳಗ್ಗೆ ೧೧ ಗಂಟೆಗೆ ಕುವೆಂಪು ಕಲಾಮಂದಿರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಳ್ಳಲಾಗಿದ್ದು ಸದರಿ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿ ಸಬ್ಬಂದಿಗಳು ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹಾಜರಾತಿ ವಹಿಯನ್ನು ಇಡಲಾಗಿದ್ದು, ಹಾಜರಾತಿ ವಹಿಯಲ್ಲಿ ಸಹಿ ಮಾಡುವಂತೆ ತಿಳಿಸಿರುವ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಅಧಿಕಾರಿ, ನೌಕರರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

























Discussion about this post