ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 38 ಮಂದಿ ಗುಣಮುಖರಾಗಿದ್ದು, ಬುಧವಾರ 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ೩, ಕಡೂರು ೧, ನರಸಿಂಹರಾಜಪುರ ೮, ಕೊಪ್ಪ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ ೧೨ಮಂದಿಯನ್ನು ಹೋಮ್ ಐಸೋಲೇಶನ್ಗೆ ಒಳಪಡಿಸಲಾಗಿದೆ. ಓರ್ವ ವ್ಯಕ್ತಿ ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಓರ್ವ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಜಿಲ್ಲೆಯಲ್ಲಿ ಇದುವರೆಗೂ ೫೧,೦೪೧ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೫೦,೩೫೭ಮಂದಿ ಗುಣಮುಖರಾಗಿದ್ದಾರೆ. ೨೫೧ಮಂದಿಯಲ್ಲಿ ಸೋಂಕು ಸಕ್ರೀಯವಾಗಿದೆ. ೩೯೫ಮಂದಿ ಇದುವರೆಗೂ ಮೃತಪಟ್ಟಿದ್ದಾರೆ. ಮಂಗಳವಾರ ಜಿಲ್ಲೆಯ ೭ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು.

























Discussion about this post