ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಜಂಟಿಯಾಗಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳವಾರ ನಡೆದ ಸಮಾವೇಶದಲ್ಲಿ ಚೈತ್ರ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು.
ಸದರಿ ವಿಚಾರದ ಕುರಿತು ರಾಜ್ಯ ಕಾಂಗ್ರೆಸ್ ಸಂಯೋಜಕರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಚೈತ್ರ ಸೇರಿದಂತೆ ಕಾರ್ಯಕ್ರಮ ಸಂಘಟಿಕರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿ ಮಾಡಿದ್ದಾರೆ.
ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಅಲ್ಲಿನ ಇನ್ಸ್‌ಪೆಕ್ಟರ್ ಮೊದಲಿಗೆ ದೂರು ಸ್ವೀಕರಿಸಲು ನಿರಾಕರಿಸಿದ್ದು, ಇದರ ಬಗ್ಗೆ ಪ್ರತ್ಯೆಕ ದೂರು ನೀಡುವ ಅವಶ್ಯಕತೆಯಿಲ್ಲ
ಈ ಬಗ್ಗೆ ದೂರು ದಾಖಲಾಗಿದೆ. ಅದೇ ದೂರಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಚಿತ್ತರಂಜನ್ ಶೆಟ್ಟಿ ಹೇಳಿರುವುದಾಗಿ ಗೌರಿ ಡಾಟ್ ಕಾಂ ಪ್ರಕಟಿಸಿದೆ.
ಆದರೆ ತಾವು ಒತ್ತಾಯ ಮಾಡಿ ದೂರು ದಾಖಲು ಮಾಡಿದ್ದೇನೆ. ಇನ್ನೂ ಎಫ್‌ಐಆರ್ ದಾಖಲಿಸಿಲ್ಲ, ನಾಳೆ ಕಮೀಷನ್ ಅವರನ್ನು ಭೇಟಿ ಮಾಡಲಿದ್ದೇನೆ. ನಾನು ಹೋರಾಟವನ್ನು ಮುಂದುವರೆಸಲಿದ್ದು, ಮುಖ್ಯಮಂತ್ರಿ ತನಕ ತೆರಳಲಿದ್ದೇನೆ ಎಂದು ಅವರು ಹೇಳಿಕೆ ನೀಡಿದ್ದಾರೆ.

























Discussion about this post