ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ21 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಶುಕ್ರವಾರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಕಾಣಿ ಸಿಕೊಂಡಿದೆ.
ಚಿಕ್ಕಮಗಳೂರು ಮೂವರು, ಕಡೂರು, ಮೂಡಿಗೆರೆ, ಕೊಪ್ಪ ತಾಲ್ಲೂಕಿನ ತಲಾ ಓರ್ವ ರು ಹಾಗೂ ನರಸಿಂಹರಾಜಪುರ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ೭ಮಂದಿಯನ್ನು ಹೋಮ್ ಐಸೋಲೇಶನ್ಗೆ ಒಳಪಡಿಸಲಾಗಿದೆ. ಓರ್ವ ವ್ಯಕ್ತಿ ಕೋವಿ ಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಜಿಲ್ಲೆಯಲ್ಲಿ ೫೧,೦೫೪ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೫೦,೪೨೦ಮಂದಿ ಗುಣ ಮುಖರಾಗಿದ್ದಾರೆ. ೨೧೮ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ೩೯೫ಮಂದಿ ಮೃತಪಟ್ಟಿ ದ್ದಾರೆ.

























Discussion about this post