ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ನೇತಾಜಿ ಸುಭಾಷ್ ಚಂದ್ರಭೋಶ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಧ್ವಜರೋಹಣವನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೇರವೆರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರು ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕ ಸಭಾ ಸದಸ್ಯರಾದ ಕುಮಾರಿ ಶೋಭ ಕರಂದ್ಲಾಜೆ, ವಿಧಾನ ಪರಿಷತ್ತಿನ ಉಪಸಭಾಪತಿಗಳಾದ ಎಂ.ಕೆ ಪ್ರಾಣೇಶ್, ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್, ಲೋಕಸಭಾ ಸಂಸದರಾದ ಪ್ರಜ್ವಲ್ ರೇವಣ್ಣ, ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಿ.ಟಿ ರವಿ, ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಪಿ ಕುಮಾರಸ್ವಾಮಿ, ತರೀಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಿ.ಎಸ್ ಸುರೇಶ್, ಕಡೂರ್ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಬೆಳ್ಳಿ ಪ್ರಕಾಶ್, ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್ ಬೋಜೆಗೌಡ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 6.00 ಗಂಟೆಗೆ ಕುವೆಂಪು ಕಲಾ ಮಂದಿರದಲ್ಲಿ ಸ್ವಾತಂತ್ರ್ಯ ಚಳವಳಿ ಹಿನ್ನೆಲೆ ರಂಗಪ್ರದರ್ಶನ ಎಂಬ ನಾಟಕ ಹಮ್ಮಿಕೊಳ್ಳಲಾಗಿದೆ.

























Discussion about this post