• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಿ ಎಲ್ಲರೂ ಸಮಾನರಾಗಿ ಬದುಕುವಂತಾಗಬೇಕು; ಸಿದ್ದರಾಮಯ್ಯ ಆಶಯ

Shri News Desk by Shri News Desk
Nov 8, 2021, 10:08 pm IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಮಂಡ್ಯ : ನನ್ನ ಪ್ರತಿಕೃತಿ ಸುಟ್ಟ ತಕ್ಷಣ ನಾನು ಸುಟ್ಟುಹೋಗಲ್ಲ, ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ. ಎಲ್ಲರೂ ಸಮಾನವಾಗಿರಬೇಕು. ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು. ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಡ್ಯದ ಕನಕ ಭವನದ ಆವರಣಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯ ಹಾಗೂ ಅತಿಥಿ ಗೃಹ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ.‌ ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಹಲವರು ಹೋಗ್ತಿದ್ದಾರೆ ಎಂದು ನಾನು ಭಾಷಣ ಮಾಡಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ. ಇದನ್ನೇ ಕೆಟ್ಟದ್ದಾಗಿ ಹೇಳಿಕೊಂಡು ನನ್ನ ವಿರುದ್ಧ ಹೋರಾಟ ಮಾಡಿದ್ದಾರೆ ಹೀಗಾಗಿ ನೀವು ಅವರ ಬಗ್ಗೆ ಹುಷಾರಾಗಿರಿ ಅಂತಾ ಎಚ್ಚರಿಸಿದರು.

ನನ್ನ ಪ್ರತಿಕೃತಿ ಸುಟ್ಟ ತಕ್ಷಣ ನಾನು ಸುಟ್ಟೋಗಲ್ಲ ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ. ಎಲ್ಲರೂ ಸಮಾನವಾಗಿರಬೇಕು. ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು. ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು. ಬಹಳ ಜನ ಬುದ್ಧಿಹೀನರು ಟೀಕೆ ಮಾಡ್ತಾರೆ.  ಸಿದ್ದರಾಮಯ್ಯ ಕುರುಬ ಸಮಾಜಕ್ಕೆ ಏನು ಕೊಟ್ಟ ಅಂತಾರೆ. ಒಂದು ಜಾತಿಯಲ್ಲಿ ಮಾತ್ರ ಬಡವ, ಶ್ರೀಮಂತ ಇಲ್ಲ. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ಮುಖ್ಯಮಂತ್ರಿಯಾಗಿ ಒಂದು ಸಮಾಜದ ಅಭಿವೃದ್ಧಿ ಬಯಸಲು ಸಾಧ್ಯವೇ ?  ಹೀಗಾಗಿ ಎಲ್ಲಾ ಜಾತಿಯ ಬಡವರ ಅಭಿವೃದ್ಧಿ ಆಗಬೇಕು. ನಾನು ಕೊಟ್ಟ ಯೋಜನೆಗಳು ಒಂದು ಜಾತಿಗೆ ಸೀಮಿತವಾಗಿಲ್ಲ.  ಅವಕಾಶದಿಂದ ವಂಚಿತರಾದವರ ಪರ ನಾನು ಕೆಲಸ ಮಾಡಿದ್ದೇನೆ. ಆದರೂ ಸಿದ್ದರಾಮಯ್ಯ ಜಾತಿ ಮಾಡ್ತಾನೆ ಅಂತಾರೆ ಅಂತಾ ದೂಷಿಸಿದರು.

ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು, ಭಗೀರಥ, ಕೃಷ್ಣ, ವೇಮನ ಮತ್ತಿತರರ ಜಯಂತಿ ಮಾಡಿದ್ದು ನಾನು. ಆದರೂ ನನ್ನನ್ನು ಜಾತಿ ಜಾತಿ ಅಂತಾರೆ. ಜಾತಿ ಮಾಡುವ ಕೊಳಕು ಮನಸ್ಸಿನವರು ನನ್ನ ವಿರುದ್ಧ ಆರೋಪ ಮಾಡ್ತಾರೆ. ಅರಸು ನಂತರ 5 ವರ್ಷ ಪೂರ್ಣಾವಧಿ ಆಡಳಿತ ಮಾಡಿದ್ದು ನಾನು. ಹೀಗಾಗಿ ಅವರಿಗೆ ಹೊಟ್ಟೆ ಕಿಚ್ಚು. ಹೊಟ್ಟೆ ಕಿಚ್ಚಿಗಾಗಿ ಈ ರೀತಿ ಆರೋಪ ಮಾಡ್ತಾರೆ. ಕುರುಬರ ಸಂಘದ ಕಾರ್ಯಕ್ರಮದಲ್ಲಿ ಇತರೆ ಜಾತಿಯವರು ನನ್ನ ಜೊತೆ ಇದ್ದಾರೆ. ಒಕ್ಕಲಿಗರು ಬಹಳಷ್ಟು ಜನ ಜೊತೆ ಬಂದಿದ್ದಾರೆ. ಆದರೂ ಕೆಲವರು ನನ್ನ ಒಕ್ಕಲಿಗರ ವಿರೋಧಿ ಅಂತಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಹಿಂದುಳಿದ ಜಾತಿಗಳ ವಿರೋಧಿಗಳು. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕೊಟ್ಟಿದ್ದು ನಾವು. 1994ರಲ್ಲಿ ರಾಜಕೀಯ ಮೀಸಲಾತಿ ಕೊಟ್ಟೆವು. ಹಾಗಾಗಿ ಇವತ್ತು ಬಿಸಿಎಂ-ಎ, ಬಿ ಮೀಸಲಾತಿಯಿಂದ ಹಲವರು ಗೆದ್ದಿದ್ದಾರೆ. ನಾವು ಕೊಟ್ಟ ಮೀಸಲಾತಿ ವಿರುದ್ಧ ಬಿಜೆಪಿಯವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಅವರ ಮನವಿಗೆ ವಿರುದ್ಧ ತೀರ್ಪು ಕೊಟ್ಟಿತು. ನಮ್ಮ ಆದೇಶವನ್ನ ಎತ್ತಿ ಹಿಡಿಯಿತು ಎಂದರು.

ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿ.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು, ಬಡವರ ಪರ ಯೋಜನೆ ಬೇಕು ಅಂದ್ರೆ. ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ.  ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲ್ಲಬೇಕು. ಅದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು. ಕೇವಲ ಘೋಷಣೆ ಕೂಗಿದರೆ ಸಾಲದು. ಕಾಂಗ್ರೆಸ್ ಗೆ ಮತ ನೀಡಿ ಗೆಲ್ಲಿಸಬೇಕು. ಮತ್ತೆ ನಮ್ಮ ಸರ್ಕಾರವೇ ಬರುವ ವಾತಾವರಣ ಶುರುವಾಗ್ತಿದೆ. ‌ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ.  ಮತ್ತೆ ನಮ್ಮದೇ ಸರ್ಕಾರ ಬರುತ್ತೋ? ಇಲ್ವೋ? ಎಂಬ ಪ್ರಶ್ನೆಯನ್ನು  ಸಭಿಕರ ಮುಂದೆ ಇಟ್ಟಾಗ ಹೌದೋ ಹುಲಿಯಾ ಎಂಬ ಉತ್ತರ ಬಂತು.

ಕೋವಿಡ್‌ನಿಂದ ಮೃತಪಟ್ಟ ಎಲ್ಲರ ವಾರಸುದಾರರಿಗೂ 5 ಲಕ್ಷ ನೀಡಿಕೆ ಕಡ್ಡಾಯವಾಗಿ ನೀಡಿ: ಸಿದ್ದರಾಮಯ್ಯ ಆಗ್ರಹ

Tags: away from societyBe equalityCaste systemFormer CM Siddaramaiah
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In