ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ17 ಮಂದಿ ಗುಣಮುಖರಾಗಿದ್ದು, ಶುಕ್ರವಾರ ಜಿಲ್ಲಾದ್ಯಂತ 34 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿ ದೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೧೦ಮಂದಿ, ಕಡೂರು ಇಬ್ಬರು, ತರೀಕೆರೆ ೫ಮಂದಿ ಮೂಡಿಗೆರೆಯ ೧೨ಮಂದಿ, ನರಸಿಂಹರಾಜಪುರದ ೪ಮಂದಿ ಹಾಗೂ ಕೊಪ್ಪ ತಾಲ್ಲೂಕಿನ ಓರ್ವನಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಪತ್ತೆಯಾದ ಸೋಂಕಿತರಲ್ಲಿ ೩೦ಮಂದಿಯನ್ನು ಹೋಮ್ ಐಸೋಲೇಶನ್‌ಗೆ ಒಳಪಡಿಸಲಾಗಿದೆ. ೩ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಓರ್ವ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆ ಯುತ್ತಿದ್ದಾರೆ.
ಕೋವಿಡ್ ಸೋಂಕಿನಿಂದ ಇಂದು ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ೪೯,೯೩೪ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ೪೮,೯೬೭ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ೬೫೬ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಇದುವರೆಗೂ ೩೮೫ಮಂದಿ ಮೃತಪಟ್ಟಿ ದ್ದಾರೆ.

























Discussion about this post