ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 43 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಶನಿವಾರ 17 ಮಂದಿಯಲ್ಲಿ ಸೋಂಕು ಕಾಣಿಸಿಕೊಂ ಡಿದೆ.
ಚಿಕ್ಕಮಗಳೂರು ತಾಲ್ಲೂಕಿನ 6, ಕಡೂರು 2, ತರೀಕೆರೆ 2, ಮೂಡಿಗೆರೆ 1, ನರಸಿಂಹ ರಾಜಪುರ 3, ಕೊಪ್ಪ 2 ಹಾಗೂ ಶೃಂಗೇರಿ ತಾಲ್ಲೂಕಿನ ಓರ್ವ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ೧೨ಮಂದಿಯನ್ನು ಹೋಮ್ ಐಸೋಲೇಶನ್ ಮಾಡಲಾಗಿದೆ. ಇಬ್ಬರ ನ್ನು ಖಾಸಗಿ ಆಸ್ಪತ್ರೆಗೆ ದಾಖಸಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ 49,511ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 48,139 ಮಂದಿ ಗುಣಮುಖರಾಗಿದ್ದಾರೆ. 951 ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇದುವರೆಗೂ 378 ಮಂದಿ ಮೃತಪಟ್ಟಿದ್ದಾರೆ.

























Discussion about this post