ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿದ್ದ ಓರ್ವ ವ್ಯಕ್ತಿ ಮಾತ್ರ ಸೋಂಕಿನಿಂದ ಗುಣಮುಖವಾಗಿದ್ದು, ಭಾನುವಾರ 50 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೧೭, ಕಡೂರು ೮, ತರೀಕೆರೆ ೬, ಮೂಡಿಗೆರೆ ೮, ನರಸಿಂಹ ರಾಜಪುರ ೫, ಕೊಪ್ಪ ೫ ಹಾಗೂ ಶೃಂಗೇರಿ ತಾಲ್ಲೂಕಿನ ಓರ್ವ ವ್ಯಕ್ತಿಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರ ಪೈಕಿ ೪೬ಮಂದಿಯನ್ನು ಹೋಮ್ ಐಸೋಲೇಶನ್‌ಗೆ ಒಳಪಡಿಸಲಾಗಿದೆ. ಇಬ್ಬರು ಖಾಸಗಿ ಹಾಗೂ ಇಬ್ಬರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದೆ.
ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ತಾಲ್ಲೂಕಿನ ೬೫ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಜಿಲ್ಲೆಯಲ್ಲಿ ಇದುವರೆಗೂ ೪೯,೫೬೧ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೮,೧೮೨ ಮಂದಿ ಗುಣಮುಖರಾಗಿ ದ್ದಾರೆ. ೯೯೯ ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಇದುವರೆಗೂ ೩೭೯ಮಂದಿ ಚಿಕಿ ತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

























Discussion about this post