ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ೬೬ಮಂದಿ ಗುಣಮುಖರಾಗಿದ್ದು, ಗುರುವಾರ ಜಿಲ್ಲೆಯಲ್ಲಿ ೬೩ಮಂದಿಯಲ್ಲಿ ಸೊಂಕು ಕಾಣಿಸಿಕೊಂಡಿ ದೆ.
ಚಿಕ್ಕಮಗಳೂರು ತಾಲ್ಲೂಕಿನ ೨೪, ಕಡೂರು ೩, ತರೀಕೆರೆ ೫, ಮೂಡಿಗೆರೆ ೧೧, ನರಸಿಂಹ ರಾಜಪುರ ೪, ಕೊಪ್ಪ ೬ ಹಾಗೂ ಶೃಂಗೇರಿಯ ೧೦ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಪತ್ತೆಯಾದ ಸೋಂಕಿತರಲ್ಲಿ ೫೬ಮಂದಿಯನ್ನು ಹೋಮ್ ಐಸೋಲೇಶನ್‌ಗೆ ಒಳಪಡಿಸಲಾಗಿದೆ. ೫ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಇಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ೫೦,೪೪೬ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೯,೩೭೩ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ ೬೧೭ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಇದುವರೆಗೂ ೩೯೦ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
Discussion about this post