ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ೭೭ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯ ೨೫ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ತಾಲ್ಲೂಕಿನ ೭, ಕಡೂರು ೪, ತರೀಕೆರೆ ೫, ಮೂಡಿಗೆರೆ ೫, ನರಸಿಂಹರಾಜಪುರ ೨, ಕೊಪ್ಪ ತಾಲ್ಲೂಕಿನ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಪತ್ತೆಯಾದ ಸೋಂಕಿತರ ಪೈಕಿ ೨೪ಮಂದಿಯನ್ನು ಹೋಮ್ ಐಸೋಲೇಶನ್ಗೆ ಒಳಪಡಿಸಲಾಗಿದೆ. ಓರ್ವ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋವಿಡ್ ಸೋಂಕಿನಿಂದ ಶನಿವಾರ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಆರೋಗ್ಯ ಇಲಾಖೆ ದೃಢಪಡಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ೫೦,೫೦೮ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ೪೯,೪೭೩ಮಂದಿ ಗುಣಮುಖರಾಗಿದ್ದಾರೆ. ಸದ್ಯ ೫೬೭ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ೩೯೧ಮಂದಿ ಮೃತಪಟ್ಟಿದ್ದಾರೆ.

























Discussion about this post