ಚಿಕ್ಕಮಗಳೂರು: ಕೋವಿಡ್ ಸೋಂಕಿಗೆ ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ೩೬ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಗುರುವಾರ ಜಿಲ್ಲೆಯ 26 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ತಾಲ್ಲೂಕಿನ ೧೨ಮಂದಿ, ಮೂಡಿಗೆರೆ ೩, ಕೊಪ್ಪ ೪ ಹಾಗೂ ಶೃಂಗೇರಿ ತಾಲ್ಲೂಕಿನ ೭ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ೨೩ಮಂದಿಯನ್ನು ಹೋಮ್ ಐಸೋಲೇಶನ್ಗೆ ಒಳಪಡಿಸಲಾಗಿದೆ. ೩ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ೫೦,೬೪೬ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೯,೭೫೬ಮಂದಿ ಗುಣಮುಖರಾಗಿದ್ದಾರೆ. ೪೬೩ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇದುವರೆಗೂ ೩೯೧ಮಂದಿ ಮೃತ ಪಟ್ಟಿದ್ದಾರೆ.

























Discussion about this post