ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿದ್ದ 34 ಮಂದಿ ಗುಣಮುಖ ರಾಗಿದ್ದು, ಶುಕ್ರವಾರ ಜಿಲ್ಲೆಯ 37 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದಾನೆ.
ಇಂದು ಪತ್ತೆಯಾದ ಸೋಂಕಿತರಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ೧೨, ಕಡೂರು ೩, ತರೀಕೆರೆ ೭, ಮೂಡಿಗೆರೆ ೮, ನರಸಿಂಹರಾಜಪುರ ೩, ಕೊಪ್ಪ ಹಾಗೂ ಶೃಂಗೇರಿಯ ತಲಾ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ ೩೭ಮಂದಿಯನ್ನು ಹೋಮ್ ಐಸೋ ಲೇಶನ್‌ಗೆ ಒಳಪಡಿಸಲಾಗಿದೆ.
ಕೋವಿಡ್ ಸೋಂಕಿಗೆ ಒಳಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ತಾಲ್ಲೂಕಿನ ೮೨ವರ್ಷ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ೫೦,೪೮೩ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ೪೯,೪೩೯ ಮಂದಿ ಗುಣಮುಖರಾಗಿದ್ದಾರೆ. ಸದ್ಯ ೬೧೯ಮಂದಿಯಲ್ಲಿ ಸೋಂಕು ಸಕ್ರೀಯವಾಗಿದ್ದು, ಇದುವರೆಗೂ ೩೯೧ ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

























Discussion about this post