ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠ ಅಥವಾ ಬಾಬಾಬುಡನ್ ಗಿರಿಯ ಗುಹೆಯಲ್ಲಿ ಪೂಜಾ ವಿಧಿ ವಿಧಾನಗಳನ್ನು ನಡೆಸ್ಲು ಮುಜಾವರರನ್ನು ನೇಮಿಸಿ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟು ರದ್ದುಗೊಳಿಸಿತ್ತು.
ಶ್ರೀ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಅಭಿವೃದ್ಧಿ ಸಮಿತಿಯ ಈ ಹಿಂದೆ ಮೇ ೧೯, ೨೦೧೮ರಂದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿ ಹಿಐಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ಅವರ ಏಕ ಸದಸ್ಯ ಪೀಠವು ಅರ್ಜಿದಾರರ ವಾದಗಳನ್ನು ಒಪ್ಪಿತು ಮತ್ತು ಮೇ ೧೯ರ ಆದೇಶವನ್ನು ರದ್ದುಗೊಳಿಸಿತು. ಇದು ಉನ್ನತ ಮಟ್ಟದ ಸಮಿತಿಯ ವರದಿಯನ್ನು ಪರಿಗಣಿಸದೆ ಸಮಸ್ಯೆಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ನ್ಯಾ. ನಾಗಮೋಹನ ದಾಸ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆಗಸ್ಟ್ ೧೫.೧೯೪೭ರ ವೇಳೆಗೆ ದೇಗುಲದಲ್ಲಿ ಚಾಲ್ತಿಯಲ್ಲಿರುವ ಧಾರ್ಮಿಕ ಆಚರಣೆಗಳ ಸ್ವರೂಪವನ್ನು ಮುಂದುವರೆಸಬೇಕಾಗಿದೆ ಎಂದು ಆದೇಶ ಹೇಳಿದೆ. ಇದರ ಜೊತೆಗೆ ಈ ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದೆ ಮತ್ತು ಇದು ವಕ್ಫ್ ಆಸ್ತಿಯಲ್ಲ ಎಂದು ಉಲ್ಲೇಖಿಸಿದೆ.
ಹಿಂದೂಗಳ ಪೂಜ್ಯ ಸ್ಥಳದ ಧಾರ್ಮಿಕ ಆಚರಣೆಗಳನ್ನು ಮುಜಾವರ್ ಗಳು ನಡೆಸಿಕೊಡಬೇಕು ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ, ಸರ್ಕಾರದ ನಿರ್ಧಾರ ಹಿಂದೂಗಳ ಭಾವನೆಗೆ ವಿರುದ್ಧ ಎಂದು ಅರ್ಜಿದಾರರು ವಾದಿಸಿದ್ದರು.
ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠದ ಪೂಜೆಗೆ ಹಿಂದಿನ ಸರ್ಕಾರ ನೇಮಿಸಿದ್ದ ಮುಜಾವರ್ ಗಳ ನೇಮಕಾತಿ ರದ್ದುಪಡಿಸಿದ್ದ ಹೈಕೋರ್ಟ್ ಪೂಜಾ ವಿಧಾನದ ಬಗ್ಗೆ ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಸೆ.೨೮ರಂದು ಸೂಚಿಸಿತ್ತು. ಸಿದ್ದರಾಮಯ್ಯ ಅಧಿಕಾರದಲ್ಲಿದ್ದ ಸರ್ಕಾರ ತೆಗೆದುಕೊಂಡಿದ್ದ ನೇಮಕಾತಿ ನಿರ್ಧಾರವನ್ನು ರದ್ದುಪಡಿಸಿದ್ದ ಹೈಕೋರ್ಟ್ ಪೂಜಾವಿಧಾನದ ಕುರಿತು ಹೊಸ ತೀರ್ಮಾನ ಕೈಗೊಳ್ಳಲು ಆದೇಶ ನೀಡಿತ್ತು.
ಸದರಿ ಆದೇಶದ ಹಿನ್ನೇಲೆಯಲ್ಲಿ ರಾಜ್ಯ ಸರ್ಕಾರವು ಸಚಿವ ಸಂಪುಟ ಉಪಸಮಿತಿ ರಚಿಸಲು ಆದೇಶ ಹೊರಡಿಸಿದೆ.

























Discussion about this post