ಉಡುಪಿ : ದಸರಾ ಹಬ್ಬ ಮುಗಿದ ತಕ್ಷಣ ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಉಡುಪಿಯಲ್ಲಿ ಈ ಕುರಿತು ಮಾತನಾಡಿದ ಸಚಿವ ಬಿಸಿ ನಾಗೇಶ್, ಮುಖ್ಯಮಂತ್ರಿಗಳು ಕೂಡ ಶಾಲೆಗಳ ಆರಂಭಕ್ಕೆ ಆಸಕ್ತಿ ತೋರಿದ್ದಾರೆ. ಟಾಸ್ಕ್ ಫೋರ್ಸ್ ಸಮಿತಿ ಸಭೆ ಕರೆದಿದ್ದಾರೆ. ‘ಹಲವು ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೂನ್ಯ ಆಗಿದೆ. ಶಾಲೆ ಆರಂಭಿಸಬಹುದೆಂದು ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹಾಗಾಗಿ ತಾಂತ್ರಿಕಾ ಸಲಹಾ ಸಮಿತಿ ಸಲಹೆ ಮೇರೆಗೆ ದಸರಾ ಮುಗಿದ ತಕ್ಷಣ ಶಾಲೆಗಳು ಆರಂಭ ಮಾಡುತ್ತೇವೆ ಎಂದು ತಿಳಿಸಿದರು. .
ಶಾಲೆಗಳಲ್ಲಿ ಕಡ್ಡಾಯ ಹಾಜರಾತಿ ಇಲ್ಲ. ಮುಂದೆಯೂ ಇರುವುದಿಲ್ಲ. ಆನ್‌ಲೈನ್ ಮತ್ತು ಆಫ್‌ಲೈನ್ ಎರಡು ಕ್ಲಾಸ್‌ಗಳು ನಡೆಯುತ್ತಿವೆ. ಆಸಕ್ತಿ ಇದ್ದವರು ನೇರ ತರಗತಿಗಳಿಗೆ ಹಾಜರಾಗಬಹುದು ಸಚಿವ ಬಿಸಿ ನಾಗೇಶ್ ಹೇಳಿದರು.

























Discussion about this post