ಚಿಕ್ಕಮಗಳೂರು,: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ೨೦೨೧-೨೨ ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯ ವಿರ್ವಹಣೆ ಕುರಿತು ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೨೦೨೧-೨೨ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಭ್ಯರ್ಥಿಗೆ ಮಾಹೆಯಾನ ರೂ. ೧೫,೦೦೦/-ಗಳ ಶಿಷ್ಯ ವೇತನ ನೀಡಲಾಗುವುದು.
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು ೪೦ ವರ್ಷದೊಳಗಿರಬೇಕು.
ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಲು ನವೆಂಬರ್ ೧೦ ಕೊನೆಯ ದಿನವಾಗಿದ್ದು ಸಂಜೆ ೫.೦೦ ಗಂಟೆಯೊಳಗೆ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಆವರಣ, ಚಿಕ್ಕಮಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಛೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿಕ್ಕಮಗಳೂರು ಇವರ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಪಡೆಯಬಹುದಾಗಿದೆ.

























Discussion about this post