ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶ ಕಂಡ ಅಪ್ರತಿಮ ನಾಯಕ ಸರ್ವ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಅವರು ದೇಶದ ಅಸ್ಮಿತೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಸಿ.ಕಲ್ಮುರಡಪ್ಪ ದೇಶದ ಪ್ರಧಾನಮಮಂತ್ರಿಗಳನ್ನು ಕೊಂಡಾಡಿದರು.
ತಾಲ್ಲೂಕಿನ ಉಂಡೇದಾಸರಹಳ್ಳಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನಲೆ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿಯವರು ಸರ್ವಜನರು ಕಲ್ಯಾಣಕ್ಕೆ ಶ್ರಮಿಸುತ್ತಿದ್ದಾರೆ. ದೇಶದ ಅಭಿವೃದ್ಧಿ ನಿಟ್ಟಿನಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವರೊಬ್ಬ ದೇಶಕಂಡ ಅಪ್ರತಿಮ ನಾಯಕ ದೇಶದ ಅಸ್ಮಿತೆ ಎಂದು ಕೊಂಡಾಡಿದರು.
ದೇಶದಲ್ಲಿ ೩೭೦ ನೇ ವಿಧಿಯ ರದ್ದು, ತ್ರಿವಳಿ ತಲಾಖ್ ರದ್ದು, ಸಿಎಎ ಜಾರಿ, ರೈತ ಕೃಷಿ ಕಾಯ್ದೆ ತಿದ್ದುಪಡಿ ಸೇರಿದಂತೆ ಅನೇಕ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ, ದೇಶದ ಮಹಿಳೆಯರಿಗೆ ಉಚಿತವಾಗಿ ಉಜ್ವಲ್ ಅಡುಗೆ ಅನಿಲ, ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ೬ ಸಾವಿರ ಆರ್ಥಿಕ ನೆರವು ಸೇರಿದಂತೆ ಹಲವಾರು ಜನಪರ ಕಾರ್ಯಕ್ರಮಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ಅವರ ಜನ್ಮದಿನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧ್ಯಂತ ಎಲ್ಲಾ ಬೂತ್ಗಳಲ್ಲಿ ಮುಂದಿನ ೨೦ ದಿನಗಳ ಕಾಲ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜ್ಶೆಟ್ಟಿ ಮಾತನಾಡಿ ದೇಶದಲ್ಲಿ ಅಟಲ್ಬಿಹಾರಿ ವಾಜಪೇಯಿ ಬಳಿಕ ಅತ್ಯಂತ ಸಮರ್ಥ ಆಡಳಿತದ ಮೂಲಕ ದೇಶವನ್ನು ಮುನ್ನಡೆಸುತ್ತಿರುವ ನಾಯಕರು ಪ್ರಧಾನಿ ನರೇಂದ್ರ ಮೋದಿಯವರು, ಕಾಂಗ್ರೆಸ್ ಆಡಳಿತಾವಧಿಯಲ್ಲಿ ದೇಶ ಅಭಿವೃದ್ಧಿಯಲ್ಲಿ ಹಿಂದುಳಿದಿತ್ತು. ಮೋದಿಯವರು ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕಲ್ಯಾಣ ಕ್ರಾಂತಿ ಸೃಷ್ಟಿಸಿದ್ದಾರೆ ಎಂದರು.
ಉದ್ಯೋಗ ಸೃಷ್ಟಿ, ಬಡವರು, ರೈತರು, ಕಾರ್ಮಿಕರು ಹಿಂದುಳಿದವರÀ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ಅವರು ಕೋವಿಡ್ ಸಂಕಷ್ಟದಲ್ಲಿ ಸಾಕಷ್ಟು ಆರ್ಥಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ. ಅವರ ಹುಟ್ಟುಹಬ್ಬ ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಹಲವು ಸೇವಾ ಸಮರ್ಪಣೆ ಕಾರ್ಯಕ್ರಮ ಆಯೋಜಿಸಿದೆ ಎಂದು ತಿಳಿಸಿದರು.
ಡಾ. ಮೋಹನ್ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ೭೧ನೇ ಜನ್ಮದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಒಳಗೊಂಡAತೆ ಹಲವು ಸೇವಾ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ. ಮನುಷ್ಯನಿಗೆ ಹಣಕ್ಕೆ ನೀಡುವ ಮಹತ್ವವನ್ನು ಆರೋಗ್ಯಕ್ಕೂ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಸಕ್ಕರೆ ಖಾಯಿಲೆ ಒಂದಾಗಿದ್ದು ಅದನ್ನು ನಿವಾರಿಸುವ ನಿಟ್ಟಿನಲ್ಲಿ ಪೌಷ್ಟಿಕಾಂಶ ಸಮತೋಲನ ಆಹಾರ ಸೇವನೆ ಮಾಡಬೇಕು, ಲಘು ವ್ಯಾಯಾಮ ಮತ್ತಿತ್ತರ ದೈಹಿಕ ಚಟುವಟಿಕೆಗಳಿಂದ ಹೃದಯಾಘಾತ ಮತ್ತಿತರ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಸಿಡಿಎ ಮಾಜಿ ಅಧ್ಯಕ್ಷ ರಾಜಪ್ಪ, ಬಿಜೆಪಿ ವಕ್ತಾರ ವರಸಿದ್ದಿ ವೇಣುಗೋಪಾಲ್, ನಗರ ಆಶ್ರಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾಶೆಟ್ಟಿ, ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ಶೋಭಾ ರಾಜೇಶ್, ಉಂಡೇದಾಸರಹಳ್ಳೀ ವಾರ್ಡ್ನ ಅಧ್ಯಕ್ಷ ಸತೀಶ್, ಜಿಲ್ಲಾ ಕಾರ್ಯದರ್ಶಿ ಸಂಜು, ಎಸ್.ಸಿ ಮೋರ್ಚಾದ ಅಧ್ಯಕ್ಷ ನರಸಿಂಹ, ಸೇರಿದಂತೆ ಮತ್ತಿತರರು ಇದ್ದರು.

























Discussion about this post