ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ (86) ಇಂದು ಮುಂಜಾನೆ ನಿಧನರಾಗಿದ್ದಾರೆ. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮುಂಜಾನೆ 4.45ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.
Discussion about this post