ಹುಬ್ಬಳ್ಳಿ: ಈ ಬಾರಿ ಬೆಳಗಾವಿಯ ಸುವರ್ಣಸೌಧದಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಈ ಕುರಿತು ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಡಿಸೆಂಬರ್ 2ನೇ ವಾರದಲ್ಲಿ ಅಧಿವೇಶನ ನಡೆಯುವ ಸಾಧ್ಯತೆಯಿದ್ದು ಈ ಕುರಿತು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೆ ಚರ್ಚಿಸಿದ್ದೇನೆ. 3 ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಹಿಗಾಗಿ ಈ ಬಾರಿ 2 ವಾರಗಳ ಕಾಲ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಿದ್ದೇವೆ ಎಂದು ತಿಳಿಸಿದರು.
ಉತ್ತರ ಕರ್ನಾಟಕದ ಸಮಸ್ಯೆಗಳ ಮೇಲೆ ಬೆಳಗಾವಿ ಅಧಿವೇಶನ ಹೆಚ್ಚು ಕೇಂದ್ರೀಕರಿಸಲಿದೆ. ಅಧಿವೇಶನದಲ್ಲಿ ಯಾವುದೇ ಕಾರಣಕ್ಕೂ ಗಲಾಟೆಗಳು ಆಗದಂತೆ ನೋಡಿಕೊಳ್ಳಲಿದೆ ಎಂದಿದ್ದಾರೆ. ಉತ್ತರ ಕರ್ನಾಟಕದ ಬಗ್ಗೆ ಹೆಚ್ಚು ಚರ್ಚೆ ನಡೆಯಲಿದೆ. ಕಲಾಪ ಸುಸೂತ್ರವಾಗಿ ನಡೆಯಲು ವಿರೋಧ ಪಕ್ಷದ ನಾಯಕರ ಜತೆಯೂ ಮಾತನಾಡಲಿದ್ದೇವೆ ಎಂದು ಬಸವರಾಜ ಹೊರಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

























Discussion about this post