ನವದೆಹಲಿ: ದೇಶದಾದ್ಯಂತ ಕಳೆದ ೨೪ ಗಂಟೆಯಲ್ಲಿ 58.45.೮೫ ಲಕ್ಷ ಡೋಸ್ ಲಸಿಕೆ ನೀಡಿಕೆಯೊಂದಿಗೆ ಇಲ್ಲಿಯವರೆಗೆ ಲಸಿಕೆ ವಿತರಣೆ ಪ್ರಮಾಣ ೬೭.೭೨ ಕೋಟಿ ದಾಟಿದೆ ಎಂದು ಕೇಂದ್ರದ ಆರೋಗ್ಯ ಸಚಿವಾಲಯ ಶನಿವಾರ ದೃಢಪಡಿಸಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ ೨೪ ಗಂಟೆಗಳಲ್ಲಿ ೧೮-೪೪ ವರ್ಷದೊಳಗಿನ ೮.೮೯ ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, ೪.೪೨ ಕೋಟಿ ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಈಡಿ ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೪೨,೬೧೮ ಹೊಸ ಕೇಸ್ ಪತ್ತೆಯಾಗಿದೆ. ಹಾಗೂ ೩೩೦ ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ ೧೬ ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಚಾಲನೆ ನೀಡಿದ್ದ ಹಿನ್ನೆಲೆಯಲ್ಲಿ ದೇಶದಾದ್ಯಂತ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗಿದೆ. ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿದೆ, ನಂತರ ೪೫ ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ ೧ರಿಂದ ೧೮-೪೫ ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರದ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ ೬೭,೦೯,೫೯,೯೬೮ ಜನರಿಗೆ ಲಸಿಕೆಯನ್ನು ನೀಡಲಾಗಿದ್ದು, ಭಾರತದಲ್ಲಿ ಇದೊಂದು ದಾಖಲೆ ನಿರ್ಮಿಸಿದ ವಿಷಯವಾಗಿದೆ.
Discussion about this post