ಬೆಂಗಳೂರು: ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭಾರಿ ಮಳೆಯು ಸುರಿಯಲಿದ್ದು ಬಂಗಾಳ ಕೊಲ್ಲಿ ಪ್ರದೇಶದಲ್ಲಿನ ಪ್ರಬಲ ಮಾರುತಗಳು ಇದಕ್ಕೆ ಕಾರಣ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಕರ್ನಾಟಕದ ಹಲವು ಬಾಗಗಳಲ್ಲಿ ಇಂದಿನಿಂದ (೧೫ ಆಗಸ್ಟ್) ಭಾರಿ ಮಳೆ ಬೀಳಲಿದೆ. ಉಡುಪಿಯಲ್ಲಿ ವ್ಯಾಪಕ ಮಳೆ, ದಕ್ಷಿಣ ಕನ್ನಡದಲ್ಲಿ ಸಾದಾರಣ ರೀತಿ ಇದ್ದು ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಳೆ ಹೆಚ್ಚು ಸುರಿಯಲಿದೆ.
ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರುತ್ತದೆ. ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಮಳೆ ತೀವ್ರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

























Discussion about this post