ದಕ್ಷಿಣ ಕನ್ನಡ: ರಾಜ್ಯದ್ಯಾಂತ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಅಪ್ರಾಪ್ತೆಯನ್ನು ಉದ್ದೇಶಪೂರ್ವಕವಾಗಿ ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತು ಬರೆಸುವಂತೆ ಮಾಡಿ ಅತ್ಯಾಚರವೆಸಗಿರುವ ಆರೋಪ ಪ್ರಾಥಮಿಕ ವರದಿಯಲ್ಲಿ ಕಂಡುಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

























Discussion about this post