• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಮಾನಸಿಕ ಖಿನ್ನತೆ ದೂರವಾದಲ್ಲಿ ಆತ್ಮಹತ್ಯೆ ತಡೆ ಸಾಧ್ಯ: ಡಾ.ವಿನಯ್

Shri News Desk by Shri News Desk
Sep 3, 2021, 11:29 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಯುವಜನರು ಮಾನಸಿಕ ಖಿನ್ನತೆಯನ್ನು ದೂರ ಮಾಡಿ ಒತ್ತಡ ಮುಕ್ತ ಜೀವನ ನಡೆಸಬೇಕು, ವಾಸ್ತವವನ್ನು ಅರಿಯುವ ಮನೋಭಾವ ಬೆಳೆಸಿಕೊಂಡರೆ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕಿದೆ ಎಂದು ಜಿಲ್ಲಾ ಮಾನಸಿಕ ರೋಗ ತಜ್ಞ ಡಾ. ವಿನಯ್‌ಕುಮಾರ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಹಾಗೂ ಎಸ್.ಟಿ.ಜೆ ಮಹಿಳಾ ಪದವಿ ಪೂರ್ವ ಕಾಲೇಜು ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ’ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ’ ಪ್ರಯುಕ್ತ ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಆತ್ಮಹತ್ಯೆ ಎಂಬುದು ಮಹಾಪಾಪ, ಒಂದು ನಿಮಿಷ ಯೋಚಿಸಿ ಜೀವನವನ್ನು ಬದಲಾಯಿಸಿ ಒಂಟಿತನ ನಿವಾರಿಸಿ, ಮಾನಸಿಕ ರೋಗ ತಡೆಗಟ್ಟಿ, ಆತ್ಮಹತ್ಯೆ ಎಂಬುದು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಆತ್ಮಹತ್ಯೆ ತಡೆಗಟ್ಟಲು ಎಲ್ಲರೂ ಒಗ್ಗೂಡೋಣ ಎಂದು ಯುವಜನತೆಗೆ ಕರೆ ನೀಡಿದರು.

ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಸೆ.೧೦ರಂದು ವಿಶ್ವ ಆತ್ಮಹತ್ಯೆ ತಡೆ ದಿನ ಆಚರಿಸಲಾಗುತ್ತದೆ. ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ (ಐಎಎಸ್ಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆಯು ಸೆಪ್ಟೆಂಬರ್ ೧೦, ೨೦೦೩ ರಂದು ಈ ದಿನವನ್ನು ಜಾರಿಗೆ ತಂದವು. ಮೊದಲ ಬಾರಿ ವಿಶ್ವ ಆತ್ಮಹತ್ಯೆ ವರದಿಯನ್ನು ೨೦೧೪ ರಲ್ಲಿ ವಿಶ್ವಸಂಸ್ಥೆ ಬಿಡುಗಡೆ ಮಾಡಿತು ಎಂದು ತಿಳಿಸಿದರು.

ಪ್ರತಿವರ್ಷ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಆದರೆ ಸೆಲೆಬ್ರಟಿಗಳು ಆತ್ಮಹತ್ಯೆ ಮಾಡಿಕೊಂಡಾಗ ಹೆಚ್ಚು ಚರ್ಚೆಗೆ ಬರುತ್ತವೆ. ಆತ್ಮಹತ್ಯೆ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ. ಕೆಲಸದ ಒತ್ತಡ, ಖಿನ್ನತೆ, ಕುಟುಂಬದಿಂದ ದೂರದಲ್ಲಿರುವುದು, ಒಂಟಿತನ, ಆರೋಗ್ಯದ ಕಡೆ ಗಮನ ಕೊಡದಿರುವುದು ಹಣಕಾಸು ಮತ್ತು ಕೆಲಸದ ಹೊರೆ, ಸೇರಿದಂತೆ ಮತ್ತಿತರ ಕಾರಣದಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದು ನಿಜಕ್ಕೂ ದುರಂತ ಈ ಬಗ್ಗೆ ಜನಜಾಗೃತಿ ಮೂಡಿಸಬೇಕಿದೆ ಎಂದರು.

ಕಳಸಾಪುರ ವೈದ್ಯಾಧಿಕಾರಿ ಡಾ. ಕಾರ್ತಿಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಎನ್ನುವುದೇ ಪರಿಹಾರವಲ್ಲ ಮನುಷ್ಯ ಹುಟ್ಟುವಾಗಲೂ ಹೋರಾಟ ನಡೆಸಿರುತ್ತಾನೆ. ಅಂತಹದರಲ್ಲಿ ಜೀವನದ ಸಮಸ್ಯೆಗಳು ಎಂದಿಗೂ ದೊಡ್ಡದಲ್ಲ. ಪ್ರತಿ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ ಕೋಪ, ಖಿನ್ನತೆಯಲ್ಲಿ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಸಮಸ್ಯೆಗಳನ್ನು ಶಾಂತಚಿತ್ತದಿಂದ ಅಥವಾ ಆಪ್ತ ಸಮಾಲೋಚನೆ ಮೂಲಕ ಪರಿಹರಿಸಿಕೊಂಡಲ್ಲಿ ಅದು ಸಮಸ್ಯೆಯೇ ಅಲ್ಲ ಎನ್ನಿಸಬಹುದು ಎಂದು ಸಲಹೆ ನೀಡಿದರು.

ದೇಶದಲ್ಲಿ ೨೦೧೫ರಿಂದ ೨೦೧೯ರ ೫ ವರ್ಷಗಳ ತುಲನಾತ್ಮಕ ವರದಿ ಪ್ರಕಾರ ಪ್ರತಿವರ್ಷ ೧.೩೩ ಲಕ್ಷ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ ತಿಳಿಸಿದೆ. ೨೦೧೯ರಲ್ಲಿ ದೇಶದಲ್ಲಿ ೧.೩೬ ಲಕ್ಷ ಜನ ನಾನಾ ಕಾರಣಗಳಿಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೊಡ್ಡ ಶ್ರೀಮಂತರೇ ಒಂಟಿತನ, ಮಾನಸಿಕ ಖಿನ್ನತೆ, ಹಣಕಾಸು, ಕುಟುಂಬ ಕಲಹ ಮತ್ತಿತ್ತರ ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಯುವಜನತೆ ಒಟ್ಟುಗೂಡಬೇಕಿದೆ ಎಂದು ಹೇಳಿದರು.

ಒಬ್ಬ ವ್ಯಕ್ತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ, ಸಾವಿನ ಕುರಿತು ಮಾತಾಡುತ್ತಿದ್ದಾನೆಂದರೆ ಅವರನ್ನು ಒಂದೆರಡು ಗಂಟೆ, ಒಂದೆರಡು ದಿನಗಳ ಮಟ್ಟಿಗೆ ನಮ್ಮ ಆಪ್ತ ಪರಿಧಿಯೊಳಗೆ ಇಟ್ಟುಕೊಳ್ಳುವುದು. ಖಿನ್ನತೆಯಲ್ಲಿರುವವರಿಗೆ ಆಪ್ತ ಸಮಾಲೋಚನೆ ಕೊಡಿಸಲು ಪ್ರಯತ್ನಿಸುವುದು. ಅತಿಯಾಗಿ ಒಂಟಿತನ ಬಯಸುವವರ ಮೇಲೆ ನಿಗಾ ಇಡುವುದು. ಇನ್ನೊಬ್ಬರ ಸಮಸ್ಯೆಗೆ, ನೋವಿಗೆ ಕಿವಿಯಾಗುವ ಕನಿಷ್ಠ ಹೃದಯವಂತಿಕೆ ತೋರಿಸೋದು ಸಮಸ್ಯೆ ತಿಳಿದು, ಸರಿಯಾದ ಚಿಕಿತ್ಸೆ ದೊರೆಯುವಂತೆ ಮಾಡಬೇಕು ಎಂದು ತಿಳಿಸಿದರು.

ಎಸ್.ಟಿ.ಜೆ ಕಾಲೇಜು ಪ್ರಾಂಶುಪಾಲರಾದ ಜೆ.ಕೆ. ಭಾರತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೋವಿಡ್ ಸಾಂಕ್ರಾಮಿಕದಿಂದಾಗಿ ಈ ವರ್ಷ ವಿಶ್ವ ಆತ್ಮಹತ್ಯೆ ತಡೆ ದಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಮಾನಸಿಕ ಖಿನ್ನತೆಯನ್ನು ತಪ್ಪಿಸಲು, ನಿಯಂತ್ರಿಸಲು ಈ ಪರಿಸ್ಥಿತಿ ಮತ್ತೊಮ್ಮೆ ಜಾಗತಿಕವಾಗಿ, ರಾಷ್ಟ್ರೀಯವಾಗಿ ಮತ್ತು ಸ್ಥಳೀಯ ಮಟ್ಟದಲ್ಲೂ ಜಾಗೃತಿ ಮೂಡಿಸುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಒತ್ತಿ ಹೇಳುತ್ತದೆ ಎಂದರು.

ಬದುಕಿನಲ್ಲಿ ಎಲ್ಲಾ ಸುಖಬೋಗಳನ್ನೂ ಹೊಂದಿದ್ದವರು ಶ್ರೀಮಂತರೂ ಅದರಲ್ಲೂ ಸಿನಿಮಾ ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಓಡುತ್ತಿರುವ ಈ ಜಗತ್ತಿನಲ್ಲಿ ಯಾರಿಗೂ ಸಮಯವೇ ಇಲ್ಲ ಎಂಬ ಮಾತಿದೆ. ಬಯಸಿದ್ದು ಸಿಗದಿರುವುದು, ಅವಮಾನ ಸಹಿಸಿಕೊಳ್ಳದಿರುವುದು, ಕೆಲಸದ ಒತ್ತಡ, ಖಿನ್ನತೆ, ಹೀಗೆ ಹಲವು ಸಮಸ್ಯೆಗಳ ಆಗರವನ್ನೇ ಮನುಷ್ಯ ತಾನಾಗಿಯೇ ಕಟ್ಟಿಕೊಂಡಿದ್ದಾನೆ ಇವುಗಳಿಂದ ಹೊರ ಬರಲಾಗದೇ ಆತ್ಮಹತ್ಯೆಗೆ ಶರಣಾಗುತ್ತಾನೆ ಇದಕ್ಕೆ ಮಾನಸಿಕವಾಗಿ ಸಮಾಲೋಚನೆ ಅಗತ್ಯವಿದ್ದು, ಸಕರಾತ್ಮಕ ಚಿಂತನೆಗಳಿಗೆ ಹೆಚ್ಚು ಮಹತ್ವ ನೀಡಬೇಕು, ಉತ್ತಮ ಹವ್ಯಾಸಗಳನ್ನು, ಸೃಜನಾತ್ಮಕ ಚಟುವಟಿಕೆಗಳನ್ನು ಆದ್ಯತೆ ನೀಡಬೇಕು ಇದರಿಂದ ಮನಸ್ಸು ಬೇರೆಡೆಗೆ ಹರಿಯುತ್ತದೆ. ಆತ್ಮಹತ್ಯೆ ಬಗ್ಗೆ ತಿಳಿದಷ್ಟು ಜಾಗೃತಿ ಮೂಡಿಸುವ ಪ್ರಯತ್ನ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಎಂ.ಆರ್ ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ನಾವು ತೆಗೆದುಕೊಳ್ಳುವ ದುಡುಕು ನಿರ್ಧಾರದಿಂದಾಗಿ ಆತ್ಮಹತ್ಯೆಯಂತಹ ಘಟನೆಗಳು ಹೆಚ್ಚಾಗುತ್ತಿವೆ. ದುಡುಕಿನ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಕೆಲವು ಸಮಸ್ಯೆಗಳಿರುತ್ತವೆ. ಅವುಗಳಿಗೆ ಪರಿಹಾರ ಸಿಕ್ಕರೆ ಆತ್ಮಹತ್ಯೆಯಿಂದ ಪಾರಾಗುತ್ತಾರೆ. ಅಂತವರಿಗೆ ಮನೋವೈದ್ಯರಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಆತ್ಮಹತ್ಯೆಗೆ ಆರ್ಥಿಕ ತೊಂದರೆ, ಸಾಂಸಾರಿಕ ತೊಂದರೆ, ವ್ಯವಹಾರದಲ್ಲಿ ನಷ್ಟ, ಆತ್ಮೀಯರ ಅಗಲಿಕೆ, ಮಾದಕ ವ್ಯಸನ ಹೀಗೆ ಹಲವು ಅಂಶಗಳು ಕಾರಣವಾಗಿರಬಹುದು ಎಂದರು.ಈ ಸಂದರ್ಭದಲ್ಲಿ ಚಿಕಿತ್ಸಾ ಮನಶಾಸ್ತ್ರಜ್ಞ ನವೀನ್‌ಕುಮಾರ್, ಮನೋ ಸಾಮಾಜಿಕ ಕಾರ್ಯಕರ್ತ ಜಯಣ್ಣ, ಶುಶ್ರೂಶಕಿ ಉಷಾ, ಹರ್ಷ ಮತ್ತಿತರರು ಇದ್ದರು.

Tags: Suicide prevention possible
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In