ಚಿಕ್ಕಮಗಳೂರು: ಮೂಡಿಗೆರೆಯ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರವನ್ನು ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್ಐ ಅರ್ಜುನ್ ಅವರಿಗೆ ನಗರದ ಒಂದನೇ ಹೆಚ್ಚುವರಿ ಸೆಷನ್ಸ್ ಜಾಮೀನು ನೀಡಲು ನಿರಾಕರಿಸಿದೆ.
ನ್ಯಾಯದೀಶೆ ಬಿ. ಪುಷ್ಪಾಂಜಲಿಯವರು ಅರ್ಜಿಯ ವಿಚಾರಣೆಯನ್ನು ನಡೆಸಿ, ಸೋಮವಾರ ಜಾಮೀನು ನಿರಾಕರಿಸಿದ್ದಾರೆ. ಅಲ್ಲದೆ, ಕೆಲವು ದಿನಗಳ ಹಿಂದೆ ನೀಡಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಸಹ ನ್ಯಾಯಾಲಯವು ಈ ಹಿಂದೆ ತಿರಸ್ಕೃತಗೊಳಿಸಿತ್ತು.
ಘಟನೆ ವಿವರ: ಮೂಡಿಗೆರೆ ತಾಲ್ಲೂಕಿನ ಕಿರಗುಂದದ ಪುನೀತ್ ಎಂಬ ಯುವಕನಿಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ PSI ಮೂತ್ರವನ್ನು ಕುಡಿಸಿದ್ದಾರೆ ಎಂಬ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ PSI ಅರ್ಜುನ್ ಅವರನ್ನು ಸೆ.೧ ರಂದು ಬೆಂಗಳೂರಿನಲ್ಲಿ ಬಂಧಿಸಿ ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

























Discussion about this post