ಚಿಕ್ಕಮಗಳೂರು: ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾನ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅತ್ಯುತ್ತಮ ಸೇವೆ ಸಲ್ಲಿಸಿರುವುದಕ್ಕಾಗಿ ರಾಜಪ್ಪ ಕುಮಾರ್ ಅವರಿಗೆ ರಾಷ್ಟ್ರ ಪತಿ ಪೊಲೀಸ್ ಪದಕ ಬಂದಿರುವ ಹಿನ್ನಲೆಯಲ್ಲಿ ಅಭಿನಂದನಾ ಪತ್ರ ನೀಡುವ ಮೂಲಕ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ವಿಧಾನ ಸಭಾ ಕ್ಷೇತ್ರದ ಶಾಸಕ ಸಿ.ಟಿ ರವಿ, ವಿಧಾನ ಪರಿಷತ್ ಶಾಸಕ ಭೋಜೆಗೌಡ, ಜಿಲ್ಲಾಧಿಕಾರಿ ಕೆ.ಎನ್ ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹೆಚ್. ಅಪರ ಜಿಲ್ಲಾಧಿಕಾರಿ ಬಿ.ಆರ್ ರೂಪ, ಚಿಕ್ಕಮಗಳೂರು ಉಪವಿಭಾಗದ ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

























Discussion about this post