ಮಂಗಳುರು: (ಕನ್ನಡನಾಡಿ ಸುದ್ದಿಜಾಲ): ಮಲೆನಾಡು ಒಳಗೊಂಡಂತೆ ಕರಾವಳಿ ಪ್ರದೇಶಗಳಲ್ಲಿ ಈಗಾಗಲೇ ಮಳೆಯಾಗುತ್ತಿದ್ದು ಆಗಸ್ಟ್ ೧೨ರವರೆಗೂ ಗುಡುಗು, ಸಿಡಿಲಿನ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲರನಾಡಿನ ಭಾಗಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳು ಸೇರಿದಂತೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಭಾಗಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆ ಇದೆ. ಇದೇ ರೀತಿ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚು ಇದೆ ಎಂದು ಇಲಾಖೆ ಸೂಚನೆ ನೀಡಿದೆ.
ಕೇರಳದ ಕರಾವಳಿ, ಅರಬ್ಬಿ ಸಮುದ್ರ, ಲಕ್ಷ ದ್ವೀಪದ ಪ್ರದೇಶಗಳಲ್ಲಿ ಗಾಳಿಯ ವೇಗ ೪೦ ರಿಂದ ೫೦ ಕಿ.ಮೀ ತಲುಪುವ ಸಾಧ್ಯತೆ ಇದ್ದು ಸಮುದ್ರದಲ್ಲಿ ಮೀನುಗಾರಿಕೆ ಯನ್ನು ತಾತ್ಕಾಲಿಕವಾಗಿ ತಡೆಯಲು ಸೂಚಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇದ್ದು ಮಳೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ರೀತಿಯಲ್ಲಿ ಕಂಡುಬರುತ್ತದೆ, ಹಾಗೆಯೇ ಉತ್ತರ ಒಳನಾಡು ಪ್ರದೇಶ, ಕರಾವಳಿಯಲ್ಲಿ ದುರ್ಬಲವಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರಿನ ಕೊಟ್ಡಿಗೆಹಾರ, ಮೈಸೂರಿನ ಸಾಲಿಗ್ರಾಮ, ಕೊಡಗಿನ ಭಾಗಮಂಡಲದಲ್ಲಿ ತಲಾ ೩ ಸೆಂ.ಮೀ ಮಳೆಯಾಗಿರುತ್ತದೆ, ಬೆಳಗಾವಿ ಜಿಲ್ಲೆಯ ಕಟ್ಕೋಲ್ ನಲ್ಲಿ ೪ ಸೆಂ.ಮೀ ಮಳೆಯಾಗಿದೆ. ಉಡುಪಿಯ ಕೊಲ್ಲೂರು, ದಾವಣಗೆರೆಯ ಚನ್ನಗಿರಿ, ಕೋಲಾರದಲ್ಲಿ ೨ ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

























Discussion about this post