ಬೆಂಗಳೂರು : ಕೊರೊನಾ ಹಾವಳಿಯ ನಡುವೆಯೇ ಸದ್ದಿಲ್ಲದೆ ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳು ಹೆಚ್ಚುತ್ತಿವೆ. ದೇಶದಲ್ಲಿ ಕಳೆದೊಂದು ತಿಂಗಳ ಅವಧಿಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ಅದ್ರಲ್ಲೂ, ಕಳೆದ ಒಂದು ವಾರದಲ್ಲಿ ೨೯೧ ಡೆಂಗಿ ಪ್ರಕರಣಗಳು ದೃಢಪಟ್ಟಿವೆ. ಇದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ ಒಂದು ವಾರದಲ್ಲಿ ೨೯೧ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಡೆಂಗಿ ಪ್ರಕರಣಗಳ ಸಂಖ್ಯೆ ೩,೩೮೬ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, ೫೭೫ ಮಂದಿ ಡೆಂಗ್ಯೂ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಚಿಕನ್‌ಗೂನ್ಯಾ ಪ್ರಕರಣಗಳು ಕೂಡ ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಈವರೆಗೆ ೧,೧೧೭ ಚಿಕೂನ್‌ಗುನ್ಯಾ ಪ್ರಕರಣಗಳು ದೃಢಪಟ್ಟಿವೆ. ಕಳೆದೊಂದು ವಾರದಲ್ಲಿ ೧೧೦ ಮಂದಿ ಚಿಕೂನ್ ಗುನ್ಯಾ ಜ್ವರಕ್ಕೆ ಒಳಗಾಗಿದ್ದಾರೆ.

























Discussion about this post