ಬೆಳಗಾವಿ : ಕರ್ನಾಟಕ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರೈತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರ ಮನೆ ಬಾಗಿಲಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಂಬಂಧಿ ಯೋಜನೆಗಳನ್ನು ತಲುಪಿಸುವ ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲೇ ಈ ಕುರಿತು ಅಧಿಕೃತ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಸೇವಕರ ಮೂಲಕ ರೈತರ ಮನೆ ಬಾಗಿಲಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ತಲುಪಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಸದರಿ ಯೊಜನೆಯಿಂದ ರೈತರಿಗೆ ಅಗತ್ಯ ಮಾಹಿತಿಗಳು ಮನೆಬಾಗಿಲಲ್ಲೇ ಸಿಗುವಂತಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

























Discussion about this post